- ಲಿಂಗಾಯತ ಸಮುದಾಯಕ್ಕೆ ನ್ಯಾಯ ನೀಡುವ ಸಲುವಾಗಿ ಹೆಚ್ಚುವರಿ ಹೊಣೆ
- ಸಚಿವ ಸ್ಥಾನದೊಂದಿಗೆ ಇತರೆ ನಾಲ್ಕು ನಿಗಮ ಮಂಡಳಿಗಳ ಜವಾಬ್ದಾರಿ
ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರಿಗೆ ನಾಲ್ಕು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಹೆಚ್ಚುವರಿ ಜವಾಬ್ದಾರಿ ಹೆಗಲಿಗೇರಿಸಿದೆ.
ದರ್ಶನಾಪುರ ಅವರಿಗೆ ಹೆಚ್ಚುವರಿ ಅಧ್ಯಕ್ಷ ಸ್ಥಾನ ನೀಡಿರುವುದು ಸಂಪುಟದಲ್ಲಿ ಲಿಂಗಾಯತ ಸಮುದಾಯದ ಪ್ರಾಮುಖ್ಯತೆ ಹೆಚ್ಚಿಸಲು ಎಂದು ಮೂಲಗಳು ತಿಳಿಸಿವೆ.
ಎಂ.ಬಿ. ಪಾಟೀಲ್ ಹೊರತುಪಡಿಸಿದರೆ ಉಳಿದ ಲಿಂಗಾಯತ ಸಚಿವರಿಗೆ ಸಣ್ಣ, ಸಣ್ಣ ಖಾತೆಗಳನ್ನು ನೀಡಿ, ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಆರೋಪದ ನಡುವೆಯೇ ದರ್ಶನಾಪುರ ಅವರಿಗೆ ನಾಲ್ಕು ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ?:ಗ್ಯಾರಂಟಿಗಳಿಗೆ ಹಣ ಹೊಂದಿಕೆ ಸರ್ಕಾರ ಸ್ಪಷ್ಟಪಡಿಸಬೇಕು, ಎಲ್ಲರಿಗೂ ತಿಳಿಯುವ ಹಕ್ಕಿದೆ: ಬೊಮ್ಮಾಯಿ
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ದರ್ಶನಾಪುರ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
1994, 2004, 2008, 2018, 2023 ರಲ್ಲಿ ಒಟ್ಟು ಐದು ಬಾರಿ ಶಾಸಕರಾಗಿರುವ ದರ್ಶನಾಪುರ ಅವರು, 1994ರಲ್ಲಿ ಇಂಧನ ಸಚಿವ, 2006ರಲ್ಲಿ ಕೃಷಿ ಮಾರುಕಟ್ಟೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.