ಬೆಳಗಾವಿ | ಕುಂಭಮೇಳಕ್ಕೆ ತೆರಳಿದ್ದ ಗೋಕಾಕ್‌ನ 6 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ

Date:

Advertisements

ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಬೆಳಗಾವಿ ಜಿಲ್ಲೆ ಗೋಕಾಕದಿಂದ ಹೋಗಿದ್ದ 6 ಜನರು, ಮಧ್ಯಪ್ರದೇಶದ ಜಬಲಪುರ್ ಬಳಿ ಸೋಮವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ತೂಫಾನ್‌ ವಾಹನದಲ್ಲಿ ಇವರೆಲ್ಲರೂ ಪ್ರಯಾಗರಾಜ್‌ಗೆ ತೆರಳಿದ್ದರು. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಲಚಂದ್ರ ಗೌಡರ (50), ಸುನೀಲ ಶೇಡಶ್ಯಾಳೆ(45), ಬಸವರಾಜ ಕುರ್ತಿ(63), ಬಸವರಾಜ ದೊಡಮಾಳ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ(61) ಮೃತರು.

Advertisements

ಈ ಸುದ್ದಿ ಓದಿದ್ದೀರಾ? ಕುಂಭಮೇಳ | ಕರ್ನಾಟಕದಿಂದ ತೆರಳಿದ್ದವರಲ್ಲಿ 20 ಮಂದಿ ಸಾವು; ಭೀಕರ ಅಪಘಾತದಲ್ಲಿ ಐವರ ದುರ್ಮರಣ

ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಬಲಪು‌ರ್ ಜಿಲ್ಲಾಧಿಕಾರಿ ದೀಪಕ್ ಸಕ್ಷೇನಾ ಹೇಳಿದ್ದಾರೆ. ‘ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದೇವೆ’ ಎಂದು ಗೋಕಾಕ ಠಾಣೆ ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Download Eedina App Android / iOS

X