ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಶಾಹೀದ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ ಪ್ರಕರಣ ಸೇರಿದಂತೆ ಈತನ ಮೇಲೆ ಒಟ್ಟು 12ಕೇಸ್‌ಗಳಿದ್ದು, ಈತನ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದರು.
ಇಂದು ಪತ್ತೆಯಾದ ಶಾಹೀದ್ ನನ್ನು ಬಂಧಿಸಲು ಪೊಲೀಸ್ ಸಿಬ್ಬಂದಿ ನಾಗರಾಜ್ ಮತ್ತು ಪಿಐ ನಾಗಮ್ಮ ತೆರಳಿದ್ದಾಗ ಶಾಹೀದ್ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಆತ್ಮ ರಕ್ಷಣೆಗಾಗಿ ಪಿಐ ನಾಗಮ್ಮ ಶಾಹೀದ್ ಕಾಲಿಗೆ ಗುಂಡು ಹೊಡೆದಿದ್ದಾರೆ.
ಇದನ್ನೂ ಓದಿ: ಭದ್ರಾವತಿ | ಹೊಸಮನೆ ಪೊಲೀಸರಿಂದ ರೌಡಿಶೀಟರ್ ಕಾಲಿಗೆ ಗುಂಡೇಟು
ಸದ್ಯ ಶಾಹೀದ್ ಪೊಲೀಸರ ವಶದಲ್ಲಿದ್ದು, ಪ್ರಕರಣ ಸಂಬಂಧ ಪೇಪರ್ ಟೌನ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಐಪಿಎಸ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.
