ಬಸವೇಶ್ವರ ವಿಚಾರಧಾರೆ ತಲುಪಿಸಲು ಬಜೆಟ್‌ನಲ್ಲಿ ₹100 ಕೋಟಿ ಇಡಿ: ಸಿಎಂಗೆ ಸ್ವಾಮೀಜಿಗಳ ಒತ್ತಾಯ

Date:

Advertisements

ನಾಡಿನ ಸಾಂಸ್ಕೃತಿಕ ನಾಯಕ ಎಂದು ಘೋಷಿತರಾಗಿರುವ ವಿಶ್ವಗುರು ಬಸವೇಶ್ವರರ ವಿಚಾರಧಾರೆಯನ್ನು ಪರಿಣಾಮಕಾರಿಯಾಗಿ ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಈ ವರ್ಷದ ಬಜೆಟ್‌ನಲ್ಲಿ 100 ಕೋಟಿ ರೂ. ನೀಡುವ ಜೊತೆಗೆ, ಮುಂದಿನ ನಾಲ್ಕು ವರ್ಷಗಳ ಬಜೆಟ್‌ನಲ್ಲಿ ತಲಾ 100 ಕೋಟಿಯಂತೆ ಒಟ್ಟು 500 ಕೋಟಿ ರೂ. ಅನುದಾನ ನೀಡಬೇಕು ಎಂದು ಸ್ವಾಮೀಜಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಸ್ವಾಮೀಜಿಗಳ ಬೇಡಿಕೆಗಳಲ್ಲಿ ಸಾಧ್ಯ ಇರುವವುದನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮದೇ ಕಾಂಗ್ರೆಸ್ ಸರ್ಕಾರ” ಎಂದರು.

“ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮ ಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ.
ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಜಾತಿ ಜಡತ್ವ, ಆರ್ಥಿಕ ಜಡತ್ವ ಇರುವ ಸಮಾಜದಲ್ಲಿ ಚಲನೆ ಸಾಧ್ಯವಿಲ್ಲ.
ಬಸವಣ್ಣನವರ ವಿಚಾರಗಳೇ ಅಂಬೇಡ್ಕರ್ ವಿಚಾರಗಳಾಗಿದ್ದು ಇವೆಲ್ಲವೂ ಸಂವಿಧಾನದಲ್ಲಿ ಅಡಕವಾಗಿವೆ” ಎಂದು ಹೇಳಿದರು.

Advertisements

“ಗೋರುಚ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ವೇದಿಕೆ. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ದೇವರು ಬೇಕಿಲ್ಲ – ಇಚ್ಛಾಶಕ್ತಿ ಸಾಕು

ಸ್ವಾಮೀಜಿಗಳ ನಿಯೋಗದ ಬೇಡಿಕೆಗಳು

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಸವಣ್ಣನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸಬೇಕು. ಜೊತೆಗೆ, ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಕ್ಷರಧಾಮದ ಮಾದರಿಯಲ್ಲಿ ಬೃಹತ್ ‘ಶರಣ ದರ್ಶನ’ ಕೇಂದ್ರ ಸ್ಥಾಪಿಸಿ, ಅಲ್ಲಿ, ಉದ್ಯಾನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸಿ ಪ್ರವಾಸಿ ತಾಣವನ್ನಾಗಿಸಬೇಕು ಎಂಬುದನ್ನು ಬಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಅವರು ಎಲ್ಲರ ಪರವಾಗಿ ಮುಖ್ಯಮಂತ್ರಿಯವರ ಗಮನಕ್ಕೆ ತಂದರು.

ಎಲ್ಲ ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ‘ಪ್ರತ್ಯೇಕ ಶರಣ ಸ್ಮಾರಕ ರಕ್ಷಣೆ ಪ್ರಾಧಿಕಾರ’ ರಚಿಸಬೇಕು. ಬಸವಕಲ್ಯಾಣದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಸದ್ಬಳಕೆಯಾಗಲು ಅಲ್ಲಿಯೇ ‘ವಚನ ವಿಶ್ವವಿದ್ಯಾಲಯ’ ಮತ್ತು ಸಂಶೋಧನ ಕೇಂದ್ರ ಆರಂಭಿಸಬೇಕು.

ಬಸವೇಶ್ವರ 1

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ‘ಬಸವಭವನ’ ನಿರ್ಮಿಸಿ, ಅಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು. ವಚನ ಸಾಹಿತ್ಯ ಸಂಗ್ರಹ, ಪ್ರಕಟಣೆ, ಮರು ಪ್ರಕಟಣೆ, ಹಸ್ತಪ್ರತಿಗಳ ದಾಖಲೀಕರಣ, ಶರಣ ಕ್ಷೇತ್ರಗಳ ಅಧ್ಯಯನ ಮತ್ತು ದಾಖಲೀಕರಣ, ವಿಚಾರಸಂಕಿರಣ, ಸಮ್ಮೇಳನಗಳು, ವಚನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಇತ್ಯಾದಿ ಚಟುವಟಿಕೆಗಳನ್ನು ನಡೆಸಲು ಶರಣ ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರಕ್ಕಾಗಿಯೇ ಇರುವ ಸಂಸ್ಥೆಗಳಿಗೆ ಅನುದಾನ ಒದಗಿಸಬೇಕು.

ಮುಖ್ಯಮಂತ್ರಿ ಭೇಟಿಗೂ ಮುನ್ನ ಈ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರ ರೇಸ್ ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿ ಬೆಳಿಗ್ಗೆ ಮಠಾಧೀಶರು, ಸಮುದಾಯದ ಸಚಿವರು, ಶಾಸಕರು ಸಭೆ ನಡೆಸಿದರು. ರಾಜ್ಯದೆಲ್ಲೆಡೆಯಿಂದ ಆಗಮಿಸಿದ್ದ ಸಮುದಾಯದ ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸಿದರು. ನಂತರ, ಮುಖ್ಯಮಂತ್ರಿಯವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X