ಶಿವಮೊಗ್ಗ | ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ: ಮಧು ಬಂಗಾರಪ್ಪ

Date:

Advertisements

ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12 ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಾಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.

ಇಂದು ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ಕೌಶಲ್ಯ ಮತ್ತು ರೋಜ್ ಗಾರ್ ಉದ್ಯೋಗಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮಕ್ಕಳು ಪ್ರಾಥಮಿಕ ಶಿಕ್ಷಣ ಪಡೆಯುವ ಹಂತದಲ್ಲಿಯೇ ಕೌಶಲ್ಯಧಾರಿತ ಶಿಕ್ಷಣ ನೀಡುವುದರಿಂದ ಅವರ ಭವಿಷ್ಯದ ಬದುಕು ಉಜ್ವಲವಾಗಲಿದೆ ಅಲ್ಲದೆ ತಮಗಿಷ್ಟವಾದ ಕ್ಷೇತ್ರದಲ್ಲಿ ನೈಪುಣ್ಯತೆ ಪಡೆದು, ಅಪೇಕ್ಷೆಯ ಉದ್ಯೋಗ ಪಡೆದು ಸ್ವಾವಲಂಬಿ ಜೀವನ ನಡೆಸಬಹುದಾಗಿದೆ. ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿದಲ್ಲಿ ಆಗಮಿಸುವ ಉದ್ಯೋಗದಾತರ ಸಂಖ್ಯೆ ಅತ್ಯಂತ ಕಡಿಮೆ ಇರಲಿದೆ. ಆದ್ದರಿಂದ ಮುಂದಿನ ಸಾಲಿನಿಂದ ಅನ್ವಯಗೊಳ್ಳುವಂತೆ ಜಿಲ್ಲಾ ಕೇಂದ್ರದಲ್ಲಿ ಆಯೋಜನೆಗೊಳ್ಳುವ ಉದ್ಯೋಗ ಮೇಳಗಳಿಗೆ ಉದ್ಯೋಗಾಕಾಂಕ್ಷಿ ನೋಂದಾಯಿತ ವಿದ್ಯಾರ್ಥಿಗಳು ಗ್ರಾಮ ಮತ್ತು ಪಟ್ಟಣ ಪ್ರದೇಶಗಳಿಂದ ನಗರ ಪ್ರದೇಶಕ್ಕೆ ತೆರಳಲು ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದರು.

Advertisements

“ಪ್ರಸ್ತುತ ಆಯೋಜಿಸಲಾಗಿರುವ ಉದ್ಯೋಗ ಮೇಳದಲ್ಲಿ ನೆರೆಯ ಜಿಲ್ಲೆಗಳು ಸೇರಿದಂತೆ ರಾಜ್ಯದ 45ಕ್ಕೂ ಹೆಚ್ಚಿನ ಕಂಪನಿಗಳ ಉದ್ಯೋಗದಾತರು ಆಗಮಿಸಿರುವುದು ವಿಶೇಷವಾಗಿದೆ. ಉದ್ಯೋಗಾಕಾಂಕ್ಷಿಗಳು ತಮಗೆ ಇಷ್ಟವಾದ ಕೆಲಸ ಮತ್ತು ಕಂಪನಿಗಳನ್ನು ಆಯ್ಕೆ ಮಾಡಿಕೊಂಡು ಆನ್ಲೈನ್ ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಉದ್ಯಶೀಲತೆಯ ದಕ್ಷ ಗುಣಗಳು, ವ್ಯಕ್ತಿತ್ವ ವಿಕಸನ, ಸಮಯ ನಿರ್ವಹಣೆ, ಸಂವಹನ ಕೌಶಲ್ಯ, ಮಾರುಕಟ್ಟೆ ಸಮೀಕ್ಷೆ, ಬ್ಯಾಂಕ್ ವ್ಯವಹಾರ, ವಿವಿಧ ಸಾಲ ಸೌಲಭ್ಯಗಳ ಮಾಹಿತಿ ಕೂಡ ದೊರೆಯಲಿದೆ” ಎಂದರು.

“ಜಿಲ್ಲೆಯಲ್ಲಿ 5544 ವಿದ್ಯಾರ್ಥಿಗಳಿಗೆ ಯಾವುದೇ ಮಧ್ಯವರ್ತಿಗಳಿಲ್ಲದೆ ಈವರೆಗೆ 11 ಕೋಟಿ ರೂಗಳ ಆರ್ಥಿಕ ನೆರವನ್ನು ಒದಗಿಸಲಾಗಿದೆ. ಗ್ಯಾರಂಟಿ ಯೋಜನೆಗಳ ವ್ಯವಸ್ಥಿತ ಅನುಷ್ಠಾನಕ್ಕಾಗಿ ಸುಮಾರು 53000 ಕೋಟಿ ರೂ. ಖರ್ಚು ಮಾಡಲಾಗಿದೆ. ಇದರೊಂದಿಗೆ ಅಭಿವೃದ್ಧಿ ಕಾರ್ಯಕ್ರಮಗಳಿಗೂ ವೇಗ ಹೆಚ್ಚಿಸಲಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್. ಎನ್. ಚನ್ನಬಸಪ್ಪ ಮಾತನಾಡಿ, “ಇಂದಿನ ಯುವ ಪೀಳಿಗೆಗೆ ಶಿಕ್ಷಣದ ಜೊತೆಗೆ ಕೌಶಲ್ಯ ಆಧಾರಿತ ತರಬೇತಿಗಳ ತುರ್ತು ಅಗತ್ಯವಿರುವುದನ್ನು ಗಮನಿಸಿ, ಪಠ್ಯದೊಂದಿಗೆ ಕೌಶಲ್ಯ ತರಬೇತಿಗಳನ್ನು ಸರ್ಕಾರ ಆರಂಭಿಸುತ್ತಿರುವುದು ಅಭಿನಂದನೀಯ ಎಂದ ಅವರು, ದೇಶದ ಎಲ್ಲಾ ಯುವಕರಿಗೆ ಯಾವುದೇ ಉದ್ಯೋಗ ಒದಗಿಸಿ, ಅವರ ಉತ್ತಮ ಭವಿಷ್ಯ ರೂಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ” ಎಂದರು.

ಇದನ್ನೂ ಓದಿ: ಶಿವಮೊಗ್ಗ | ಸಮಾಜದ ಮುಖ್ಯವಾಹಿನಿಗೆ ಬರಲು ಸಂಘಟನೆ ಮುಖ್ಯ: ಸಚಿವ ಮಧು ಬಂಗಾರಪ್ಪ

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಬಿಲ್ಕಿಸ್ ಬಾನು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ರಾಜ್ಯ ಭೋವಿ ನಿಗಮದ ಅಧ್ಯಕ್ಷ ಆರ್. ರವಿಕುಮಾರ್, ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಗಣ್ಯರು, ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X