ಬೀದರ್ | ಬಸ್ ನಿರ್ವಾಹಕನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಆಗ್ರಹ

Date:

Advertisements

ಬೆಳಗಾವಿ ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ವಾಯುವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಆಗ್ರಹಿಸಿದೆ.

ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ನೇತೃತ್ವದಲ್ಲಿ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಮುಖ್ಯಮಂತ್ರಿಗಳ‌ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

‘ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ತೀವ್ರ ಖಂಡನೀಯ. ಹಲ್ಲೆ ಪ್ರಕರಣದ 20 ಆರೋಪಿಗಳ ಪೈಕಿ ಐವರನ್ನು ಮಾತ್ರ ಬಂಧಿಸಿದ್ದು, ಇನ್ನೂ 15 ಜನ ರಾಜಾರೋಷವಾಗಿ ತಿರುಗುತ್ತಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸುವ ಬದಲು ಬಸ್ ನಿರ್ವಾಹಕನ ವಿರುದ್ಧವೇ ಪೋಸ್ಕೊ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದು ಅನ್ಯಾಯವಾಗಿದೆ’ ಎಂದರು.

Advertisements

‘ಎಂಎಎಸ್ ಕಾರ್ಯಕರ್ತರು ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್‍ಗಳಿಗೆ ಕಪ್ಪು ಮಸಿ ಬಳಿದು, ನಾಲಿಗೆ ಹರಿಯಬಿಟ್ಟಿದ್ದು, ದಿನೇ ದಿನೇ ಇವರ ದಬ್ಬಾಳಿಕೆ ಹೆಚ್ಚುತ್ತಿದೆ’ ಎಂದು ಆರೋಪಿಸಿದರು.

‘ರಾಜ್ಯದ ಗಡಿಯಲ್ಲಿ ಅಶಾಂತಿ ಉಂಟು ಮಾಡುತ್ತಿರುವ ಎಂಇಎಸ್ ಅನ್ನು ರದ್ದುಪಡಿಸಬೇಕು. ಬಸ್ ನಿರ್ವಾಹಕನ ವಿರುದ್ಧ ಪೋಸ್ಕೊ ಅಡಿ ದಾಖಲಿಸಿರುವ ಪ್ರಕರಣ ವಾಪಸ್ ಪಡೆಯಬೇಕು. ಕರ್ನಾಟಕ ವಿರೋಧಿ ಕೃತ್ಯಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಸೇನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಕಾರ್ಯಜರ್ಶಿ ಜಿತೇಂದ್ರ ರಾಠೋಡ್, ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷ ಅನಿಲ್ ರಾಜಗೀರಾ, ಸಾಯಿನಾಥ ಕಾಳೇಕರ್, ಕೃಷ್ಣಾ ತೆಲಂಗ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X