ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಖಮೆನ್‌ಲೋಕ್‌ನ ಹಳ್ಳಿಯೊಂದರ ಮೇಲೆ ಶಸ್ತ್ರಸಜ್ಜಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಕನಿಷ್ಠ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು, 10 ಮಂದಿ ಗಾಯಗೊಂಡಿದ್ದಾರೆ.
ಇಂಫಾಲ್ ಪೂರ್ವ ಜಿಲ್ಲೆ ಮತ್ತು ಕಾಂಗ್ಪೋಕಿ ಜಿಲ್ಲೆಯ ಗಡಿಯಲ್ಲಿರುವ ಖಮೆಲೋಕ್ ಗ್ರಾಮವನ್ನು ಸುತ್ತುವರೆದ ಭಯೋತ್ಪಾದಕರು, ಮಂಗಳವಾರ ತಡ ರಾತ್ರಿ 1 ಗಂಟೆಯ ಸುಮಾರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ನಡೆಸಿದ್ದಾರೆ. ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಇಂಫಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇತೀ ಪ್ರಾಬಲ್ಯದ ಇಂಫಾಲ್ ಪೂರ್ವ ಜಿಲ್ಲೆ ಮತ್ತು ಬುಡಕಟ್ಟು ಜನಾಂಗದ ಬಹುಸಂಖ್ಯಾತ ಕಾಂಗ್ಪೋಕ್ಪಿ ಜಿಲ್ಲೆಯ ಗಡಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಮಣಿಪುರದಲ್ಲಿ ಕುಕಿ ಮತ್ತು ಮೇತೀ ಸಮುದಾಯಗಳ ನಡುವೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಇನ್ನೂ ನಿಂತಿಲ್ಲ. ಇದುವರೆಗೂ ನೂರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ.
ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಸುಮಾರು 10,000 ಯೋಧರನ್ನು ನಿಯೋಜಿಸಲಾಗಿದೆ. ಸರ್ಕಾರ ಮತ್ತು ಪೊಲೀಸ್ ಇಲಾಖೆ ಶಾಂತಿ ಕಾಪಾಡಲು ಕರ್ಫ್ಯೂ, ಮತ್ತು ಜೂನ್ 15ರವರೆಗೆ ಇಂಟರ್‌ನೆಟ್ ಸ್ಥಗಿತಗೊಳಿಸಿದರೂ ಉದ್ವಿಗ್ನ ಸ್ಥಿತಿ ಕಡಿಮೆಯಾಗಿಲ್ಲ.
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ ಸ್ಥಳಾಂತರಗೊಂಡ 50,000ಕ್ಕೂ ಹೆಚ್ಚು ಜನರು, ರಾಜ್ಯಾದ್ಯಂತ 349 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಇದ್ದಾರೆ. 253 ಚರ್ಚ್‌ಗಳು ಮತ್ತು ಹಲವು ದೇವಸ್ಥಾನಗಳನ್ನು ಸುಟ್ಟು ಹಾಕಲಾಗಿದೆ ಎಂದು ವರದಿಗಳಿವೆ ಹೇಳಿದೆ