ತುಮಕೂರು ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ : ಸಚಿವ ಡಾ.ಜಿ. ಪರಮೇಶ್ವರ

Date:

Advertisements

ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮೀ  , ಶಕ್ತಿ, ಯುವನಿಧಿ, ಗೃಹಜ್ಯೋತಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ತೋರಬಾರದು ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ತಿಳಿಸಿದರು. 

ತುಮಕೂರು  ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2024-25ನೇ ಸಾಲಿನ 3ನೇ  ತ್ರೖಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

 ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಈ ಯೋಜನೆಗಳ ಕುರಿತು ಮಾಹಿತಿ ನೀಡುತ್ತಾ, ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ ಆಗಸ್ಟ್ 2023ರಿಂದ ಅಕ್ಟೋಬರ್ 2024ರವರೆಗೆ 90,38,371 ಫಲಾನುಭವಿಗಳಿಗೆ ಒಟ್ಟು 1807.67 ಕೋಟಿ ರೂ. ಪಾವತಿಸಲಾಗಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ 2023 ಜೂನ್‌ನಿಂದ ಜನವರಿ 2025ರವರೆಗೆ 1164.14 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು, ಇದರ ಒಟ್ಟು ಆದಾಯ 34184.97 ಲಕ್ಷ ರೂ.ಗಳಾಗಿದೆ. ಯುವನಿಧಿ ಯೋಜನೆಯಲ್ಲಿ ಜನವರಿ 2025 ಅಂತ್ಯಕ್ಕೆ 7743 ಯುವಜನರು ನೋಂದಣಿಯಾಗಿದ್ದು, 5425 ಜನರಿಗೆ ಡಿಬಿಟಿ ಮೂಲಕ 7.60,83,000 ರೂ. ಪಾವತಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಜುಲೈ 2023 ರಿಂದ ಸೆಪ್ಟೆಂಬರ್ 2024ರವರೆಗೆ 6,08,446 ಪಡಿತರ ಚೀಟಿಗಳಿಗೆ ಒಟ್ಟು 509,43,46,990 ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ಆಗಸ್ಟ್ 2023 ರಿಂದ ನವೆಂಬರ್ 2024 ರವರೆಗೆ 802093 ಫಲಾನುಭವಿ ಗೃಹ ಬಳಕೆ ಸ್ಥಾವರಗಳಿಗೆ 343.13 ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದರು. 

Advertisements
1001094473

 ನಂತರ ಗೃಹ ಸಚಿವರು ಮಾತನಾಡಿ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ತಮ್ಮ ಸವಲತ್ತುಗಳನ್ನು ಅಧಿಕಾರಿಗಳು ವಿಳಂಬ ಮಾಡದೆ ಪಾವತಿ ಮಾಡಬೇಕೆಂದರು. 

 ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಬ್ಯಾಚ್-1 ರಿಂದ 4ರವರೆಗೂ ಒಟ್ಟು 3699 ಕಾಮಗಾರಿಗಳಿದ್ದು, ಇವುಗಳಿಗೆ 2976 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದ್ದು, 800 ಕಾಮಗಾರಿ ಪೂರ್ಣಗೊಂಡಿದ್ದು, 1555 ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ. ಬಾಕಿ ಇರುವ ಕಾಮಗಾರಿಗಳನ್ನು ಒಂದೆರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

1001094468

 ಜಿಲ್ಲೆಯಲ್ಲಿ ಕುಡಿಯುವ ನೀರು, ವಿದ್ಯುಚ್ಛಕ್ತಿ, ಬೆಳೆ ವಿಮೆ, ಇವುಗಳನ್ನು ಆದ್ಯತೆ ಮೇರೆಗೆ ಜನರಿಗೆ ನೀಡಬೇಕೆಂದು ತಾಕೀತು ಮಾಡಿದರು. ಆರೋಗ್ಯ ಸೇವೆ ನೀಡುವಲ್ಲಿ ಸಹ ಜಿಲ್ಲೆ ಪ್ರಗತಿ ಸಾಧಿಸಿ ಗರ್ಭಿಣಿ, ಬಾಣಂತಿಯರ ಸವಲತ್ತುಗಳನ್ನು ಕಾಲಕಾಲಕ್ಕೆ ನೀಡಬೇಕೆಂದರು. 

1001094472

 ಸಭೆಯಲ್ಲಿ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ತುರುವೇಕೆರೆ ಶಾಸಕರಾದ ಎಂ.ಟಿ.ಕೃಷ್ಣಪ್ಪ, ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ.ಪ್ರಭು ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X