ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ತಹಶೀಲ್ದಾರ್ ಮೇಘನಾ ಜಿ ಅವರಿಗೆ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದ್ದು, ನೂತನ ತಹಶೀಲ್ದಾರ್ ಕೆ ಎಂ ಅರವಿಂದ್ ಅವರನ್ನು ನೇಮಕ ಮಾಡಿದೆ.
ಸಕಲೇಶಪುರ ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ ಮೇಘನಾ ಜಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆದರೆ ಮೇಘನಾ ಜಿ ಅವರಿಗೆ ಸ್ಥಳ ನಿಯೋಜನೆಗೊಳಿಸದೆ ಸರ್ಕಾರ ವರ್ಗಾವಣೆ ಮಾಡಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿದ್ದೀರಾ?ಹಾಸನ | ದಲಿತರ ಮೇಲಿನ ದೌರ್ಜನ್ಯ ನಿಲ್ಲದಿದ್ದರೆ ಬೃಹತ್ ಪ್ರತಿಭಟನೆ: ದಸಂಸ ಎಚ್ಚರಿಕೆ
ಮಂಗಳೂರು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅರವಿಂದ್ ಕೆ ಎಂ(ಗ್ರೇಡ್ -2) ಅವರನ್ನು ಸರ್ಕಾರ ನೂತನ ತಹಶೀಲ್ದಾರ್ ಆಗಿ ನೇಮಕ ಮಾಡಿದೆ.
