ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ ಪರಿಹಾರ ಹಣವನ್ನು ಕ್ಷೇತ್ರವಾರು ಹಂಚಿಕೆ ಮಾಡದೆ, ಜಿಲ್ಲಾಧಿಕಾರಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಶಾಸಕ ಎಚ್ ಡಿ ರೇವಣ್ಣ ಭಾನುವಾರ ಮಾಧ್ಯಮದವರೊಂದಿಗೆ ತಿಳಿಸಿದರು.
ಹಾಸನ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸರ್ಕಾರದಿಂದ ಬಿಡುಗಡೆಯಾಗಿರುವ ಅತಿವೃಷ್ಟಿ ಪರಿಹಾರದ ಹಣಕ್ಕೆ ಜಿಲ್ಲಾಧಿಕಾರಿ, ಗಂಧದಕಡ್ಡಿ, ಕರ್ಪೂರ ಹಚ್ಚಿ ಪೂಜೆ ಮಾಡಲಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ತುಂಗೆಯ ದಡದಲ್ಲಿ ಕಲುಷಿತ ಮಣ್ಣು; ಸ್ಥಳೀಯರಲ್ಲಿ ಭವಿಷ್ಯದ ಆತಂಕ
“ರಾಜ್ಯದಲ್ಲಿ ಆಡಳಿತ ಕಾರ್ಯ ಸಂಪೂರ್ಣ ಕುಸಿದಿದೆ. ಸರ್ಕಾರ ಅತಿವೃಷ್ಟಿ ಪರಿಹಾರವಾಗಿ ₹10 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲಾಧಿಕಾರಿ ಅದನ್ನು ಹಾಗೆಯೇ ಇಟ್ಟುಕೊಂಡಿದ್ದಾರೆ. ಗುಂಡಿ ಮುಚ್ಚಲು ಡಿಸಿ ಹಣ ಕೊಡುತ್ತಿಲ್ಲ. ಬಿಡುಗಡೆಯಾಗಿರುವ ಹಣವನ್ನು ಖಜಾನೆಯಲ್ಲಿ ಇಟ್ಟುಕೊಂಡಿದ್ದಾರೆ. ಜಿಲ್ಲಾಧಿಕಾರಿಯವರು ಹಣ್ಣು, ಕಾಯಿ ಒಡೆದು ದೀಪ ಹಚ್ಚಿ ಪೂಜೆ ಮಾಡಲಿ” ಎಂದು ವ್ಯಂಗ್ಯವಾಡಿದರು.
