ಬೆಂಗಳೂರು| ಮಳೆಗಾಲದಲ್ಲಿ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಿ: ತುಷಾರ್ ಗಿರಿನಾಥ್

Date:

Advertisements
  • ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ಹೆಚ್ಚು ನಿಗಾವಹಿಸಬೇಕು
  • ಮರಗಳು ಬಿದ್ದಿರುವ ಸ್ಥಳಕ್ಕೆ ಹೋಗಲು ತಂಡಗಳು ಸದಾ ಸನ್ನದ್ಧ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಕೆಳ ಸೇತುವೆಗಳಲ್ಲಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ಕೂಡಲೆ ಸಿಸಿಟಿವಿ, ವಿದ್ಯುತ್ ದೀಪ ಹಾಗೂ ಮಳೆ ನೀರಿನ ಪ್ರಮಾಣ ತಿಳಿಯಲು ಮೀಟರ್ ಗೇಜ್ ಅಳವಡಿಸಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆಗಾಲದ ಸಿದ್ದತೆ ಕುರಿತು ಹಿರಿಯ ಅಧಿಕಾರಿಗಳ ಜೊತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಸಭೆ ನಡೆಸಿದರು. ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, “ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 53 ಕೆಳಸೇತುವೆಗಳು ಬರಲಿದ್ದು, ಈ ಪೈಕಿ 41 ಕೆಳಸೇತುವೆಗಳಲ್ಲಿ ಈಗಾಗಲೇ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಬಾಕಿ 12 ಕೆಳಸೇತುವೆಗಳಲ್ಲಿ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಬೇಕಿದ್ದು, ಕೂಡಲೆ ಅಗತ್ಯ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಹೇಳಿದರು.

“ನಗರದಲ್ಲಿ 198 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಿದ್ದು, ಅದರಲ್ಲಿ 118 ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ನೀಡಲಾಗಿದೆ. ಇನ್ನುಳಿದ 80 ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳಲಾಗಿದ್ದು, ಈ ಪೈಕಿ ಎಲ್ಲ ಸೂಕ್ಷ್ಮ ಪ್ರದೇಶಗಳಲ್ಲಿ ಮತ್ತೊಮ್ಮೆ ಪರಿಶೀಲಿಸಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

Advertisements

“ನಗರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ಹೆಚ್ಚು ನಿಗಾವಹಿಸಬೇಕಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ನೀರು ನಿಲ್ಲುವಂತಹ ಪ್ರದೇಶದಲ್ಲಿ ಪಂಪ್‌ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಇನ್ನು ಅರಣ್ಯ ವಿಭಾಗದಿಂದ ಮರಗಳು ಬಿದ್ದಿರುವ ಸ್ಥಳಕ್ಕೆ ತ್ವರಿತವಾಗಿ ಹೋಗಲು ತಂಡಗಳು ಸದಾ ಸನ್ನದ್ಧವಾಗಿರಬೇಕು. ಎಲ್ಲಿಯೂ ಯಾವುದೇ ರೀತಿಯ ತೊಂದರೆಯಾಗದಂತೆ ನಾಗರಿಕರಿಂದ ಬಂದಂತಹ ದೂರುಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

“ನಗರದಲ್ಲಿ ಮೆಟ್ರೋ, ಜಲಮಂಡಳಿ, ಬೆಸ್ಕಾಂ, ಕೆಪಿಟಿಸಿಎಲ್, ಗೇಲ್ ಸೇರಿದಂತೆ ಇನ್ನಿತರೆ ಇಲಾಖೆಗಳು ಕೈಗೆತ್ತಿಕೊಳ್ಳುವ ಕಾಮಗಾರಿಗಳಿಂದ ರಸ್ತೆ ಬದಿಯ ಚರಂಡಿಗಳು, ರಸ್ತೆ ಮೇಲ್ಮೈ ಹಾಳಾಗಿ ಮಳೆಗಾಲದಲ್ಲಿ ರಸ್ತೆಗಳ ಮೂಲಕ ನೀರು ನುಗ್ಗುವುದು, ನೀರು ನಿಲ್ಲುವ ಸಮಸ್ಯೆಯಾಗುತ್ತಿದೆ. ಆದ್ದರಿಂದ ಶೀಘ್ರವಾಗಿ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರ ಅಧ್ಯಕ್ಷತೆಯಲ್ಲಿ ಎಲ್ಲ ಇಲಾಖೆಗಳ ಜೊತೆ ಸಮನ್ವಯ ಸಭೆ ನಡೆಸಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದುಪ್ಪಟ್ಟಾದ ತರಕಾರಿ ಬೆಲೆ

“ಆಯಾ ವಲಯ ಹಿರಿಯ ಅಧಿಕಾರಿಗಳು ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೋಳ್ಳಬೇಕು. ಈ ಸಂಬಂಧ ರಾಜಕಾಲುವೆ ಕಾಮಗಾರಿ, ಪ್ರವಾಹ ಪೀಡಿತ ಪ್ರದೇಶಗಳು, ಕೆಳಸೇತುವೆ ಹಾಗೂ ಮೇಲುಸೇತುವೆಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳದಲ್ಲಿ ಏನಾದರು ಸಮಸ್ಯೆ ಇದ್ದರೆ ಕೂಡಲೆ ಅದನ್ನು ಬಗೆಹರಿಸುವ ಕೆಲಸ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಎಲ್ಲ ವಲಯ ಆಯುಕ್ತರು, ಎಲ್ಲ ವಲಯ ಜಂಟಿ ಆಯುಕ್ತರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X