ಶಿವಮೊಗ್ಗ | ಅಪಘಾತ ನಿಯಂತ್ರಣಕ್ಕೆ ರಿಫ್ಲೆಕ್ಟರ್ ಸ್ಟಿಕರ್ ಅಭಿಯಾನ

Date:

Advertisements

ಅಪಘಾತಗಳ ನಿಯಂತ್ರಣಕ್ಕಾಗಿ ಟ್ರಾಫಿಕ್‌ ಪೊಲೀಸರು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಭಿಯಾನ ಆರಂಭಿಸಿದ್ದು, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಫೆಬ್ರವರಿ 24ರಂದು ರಿಫ್ಲೆಕ್ಟರ್ ಸ್ಟಿಕರ್ ಅಂಟಿಸುವ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ.

ಫೆಬ್ರವರಿ 25ರಂದು ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, “ಅಪಘಾತಗಳ ನಿಯಂತ್ರಣ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವ ಕಾರ್ಯಾಚರಣೆ ನಡೆಸಲಾಯಿತು” ಎಂದು ತಿಳಿಸಿದರು.

1001283477

“ರಾತ್ರಿ ವೇಳೆ ಸರಕು ಸಾಗಾಣೆ ವಾಹನಗಳು, ಲಾರಿ, ಟ್ರ್ಯಾಕ್ಟರ್ ಸೇರಿದಂತೆ ಭಾರೀ ವಾಹನಗಳ ಗೋಚರತೆ ಹೆಚ್ಚಿಸಲು ಸದರಿ ವಿಶೇಷ ಕಾರ್ಯಾಚರಣೆಯನ್ನು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ನಡೆಸಲಾಯಿತು” ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

Advertisements
1001283470

ಶಿವಮೊಗ್ಗ ಬಿ ಉಪ ವಿಭಾಗದಲ್ಲಿ 43, ಭದ್ರಾವತಿ ಉಪ ವಿಭಾಗದಲ್ಲಿ 14, ಸಾಗರ ಉಪ ವಿಭಾಗದಲ್ಲಿ 50, ಶಿಕಾರಿಪುರ ಉಪ ವಿಭಾಗದಲ್ಲಿ 58 ಸೇರಿದಂತೆ ಒಟ್ಟಾರೆ 165 ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್‌ಗಳನ್ನು ಅಂಟಿಸಲಾಯಿತು. ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸುವುದರಿಂದ, ಚಾಲಕರಿಗೆ ಮುಂದೆ ಹೋಗುತ್ತಿರುವ ಹಾಗೂ ಮುಂಭಾಗದಿಂದ ಆಗಮಿಸುವ ವಾಹನಗಳ ಗೋಚರತೆ ಹೆಚ್ಚಾಗುತ್ತದೆ. ಇದರಿಂದ ವಾಹನಗಳ ಅಸ್ಪಷ್ಟ ಗೋಚರತೆಯಿಂದ ಉಂಟಾಗಬಹುದಾದ ಅಪಘಾತಗಳ ನಿಯಂತ್ರಣ ಸಾಧ್ಯವಾಗುತ್ತದೆ” ಎಂದು ತಿಳಿಸಿದರು.

1001282681
1001282723

“ಈ ಕಾರಣದಿಂದ ಪ್ರತಿಯೊಂದು ವಾಹನಗಳ ಚಾಲಕರು, ತಮ್ಮ ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಂಟಿಸಬೇಕು. ಸಂಚಾರಿ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡಬೇಕು” ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X