ಕಟ್ಟಿಗೆ ತುಂಬಿದ ಲಾರಿ ಉರುಳಿಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಮನಾಬಾದ್ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಮಂಗಳವಾರ ಸಂಜೆ ನಡೆದಿದೆ.
ಪಟ್ಟಣದ ಶಿವಪುರ ಬಡಾವಣೆಯ ನಿವಾಸಿ ಎಂಡಿ ಫೇರೋಜ್ ಕರೀಂ ಸಾಬ್ (40) ಮೃತರು ಎಂದು ಗುರುತಿಸಲಾಗಿದೆ.
ಮುಂಬೈ ಕಡೆಯಿಂದ ಹೈದರಾಬಾದ್ ಕಡೆಗೆ ಕಟ್ಟಿಗೆ ಸಾಗಿಸುತ್ತಿದ್ದ ಲಾರಿ ಹುಮನಾಬಾದ್‌ದಿಂದ ರಾಜೇಶ್ವರ ಕಡೆಗೆ ಹೋಗುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | 15 ತಿಂಗಳಾದರೂ ಪದವೀಧರ ಶಿಕ್ಷಕರಿಗಿಲ್ಲ ನಾಲ್ಕು ತಿಂಗಳ ಪಗಾರ!
ಹುಮನಾಬಾದ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.