ಮುಂದಿನ ತಿಂಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ತೆರಳಲು ಉಚಿತ ಬಸ್ ಸೇವೆ ನೀಡಲಾಗುತ್ತದೆ ಎಂದು ರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1ರಿಂದ 20 ರವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04 ರವರೆಗೆ ನಡೆಯಲಿದೆ.
ಇದನ್ನು ಓದಿದ್ದೀರಾ? ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ ಉಚಿತ ಬಸ್ ಸೇವೆಯನ್ನು ಕಲ್ಪಿಸಿದೆ.
“ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
