ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಕೊರಳಿಗೆ ಡಿನೋಟಿಫಿಕೇಷನ್‌ ಉರುಳುಕಲ್ಲು!

Date:

Advertisements

ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ಸಂಕಟದಲ್ಲಿ ಸಿಲುಕಿಸಿದೆ.

ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನನ್ನು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಡಿನೋಟಿಫೈ ಮಾಡಿದ್ದರು. ಈ ಸಂಬಂಧ ಕುಮಾರಸ್ವಾಮಿ ವಿರುದ್ಧ ಹೂಡಿದ್ದ ಪ್ರಕರಣದಲ್ಲಿ ರಾಜ್ಯ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು. ಈ ಬಿ ರಿಪೋರ್ಟನ್ನು ರಾಜ್ಯ ಹೈಕೋರ್ಟ್​ ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ ತೀರ್ಪನ್ನು ಕುಮಾರಸ್ವಾಮಿ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಿದ್ದರು​.‌ ಮಂಗಳವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕುಮಾರಸ್ವಾಮಿಯವರ ಈ ಮೇಲ್ಮನವಿಯನ್ನು ವಜಾಗೊಳಿಸಿದೆ. ಪರಿಣಾಮವಾಗಿ ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ಕಾಯಿದೆಯಡಿ ವಿಚಾರಣೆ ಮುಂದುವರೆಯಲಿದೆ.

ನ್ಯಾಯಮೂರ್ತಿಗಳಾದ ದೀಪಾಂಕರ್ ದತ್ತ ಮತ್ತು ರಾಜೇಶ್ ಬಿಂದದಲ್ ಅವರನ್ನು ಈ ಪೀಠ ಒಳಗೊಂಡಿತ್ತು. ಭ್ರಷ್ಟಾಚಾರ ತಡೆ ಕಾಯ್ದೆ ತಿದ್ದುಪಡಿಯ ಅಡಿಯಲ್ಲಿ ವಿನಾಯಿತಿ ನೀಡುವಂತೆ ಕೋರಿ ಎಚ್‌.ಡಿ ಕುಮಾರಸ್ವಾಮಿ ಸಲ್ಲಿಸಿರುವ ಮೇಲ್ಮನವಿಯಲ್ಲಿ ಯಾವುದೇ ‘ಮೆರಿಟ್’ ಇಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. 

Advertisements

ಕಾಯಿದೆ ತಿದ್ದುಪಡಿ ಜಾರಿಯಾಗುವ ಮೊದಲೇ ನಡೆದಿದೆ ಎನ್ನಲಾಗಿರುವ ಕೃತ್ಯಕ್ಕೆ ಆನಂತರ ಮಾಡಿರುವ ತಿದ್ದುಪಡಿಯನ್ನು ಪೂರ್ವಾನ್ವಯವಾಗಿ ಅನ್ವಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಕುಮಾರಸ್ವಾಮಿ ಅವರ ಅಹವಾಲನ್ನು ತಳ್ಳಿಹಾಕಿದೆ.

2006ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬನಶಂಕರಿ 5ನೇ ಹಂತದ ಹಲಗೆವಡೇರಹಳ್ಳಿಯಲ್ಲಿ 3 ಎಕರೆ 34 ಗುಂಟೆ ಜಮೀನನ್ನು ಡಿನೋಟಿಫೈ ಮಾಡಿರುವ ಆರೋಪವನ್ನು ಕುಮಾರಸ್ವಾಮಿ  ಎದುರಿಸಿದ್ದಾರೆ. ಹಲಗೆವಡೇರಹಳ್ಳಿ ಸರ್ವೆ ನಂ. 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫೈ ಮಾಡಲಾಗಿದೆ. 2010ರಲ್ಲಿ ಇದೇ ಜಾಗವನ್ನು 4.14 ಕೋಟಿ ರೂಪಾಯಿಗೆ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಮುಡಾ ಹಗರಣ | ಸಂಸದ ಕುಮಾರ ನಾಯಕ್, ಅಧಿಕಾರಿಗಳ ತಪ್ಪಿಗೆ ಸರ್ಕಾರದ ಮುಂದಿನ ಕ್ರಮವೇನು?

ಎಂ.ಎಸ್. ಮಹದೇವಸ್ವಾಮಿ ಎಂಬುವರು 2012ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಇದನ್ನು ಆಧರಿಸಿ ನ್ಯಾಯಾಲಯ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.

2019ರಲ್ಲಿ ಕುಮಾರಸ್ವಾಮಿ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದಾಗ ಲೋಕಾಯುಕ್ತರು ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ವರದಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯವು ಆರೋಪಗಳು ವಿಚಾರಣೆಗೆ ಅರ್ಹವೆಂದು  ಕುಮಾರಸ್ವಾಮಿಯವರಿಗೆ ಸಮನ್ಸ್‌ ಜಾರಿಗೊಳಿಸಿತ್ತು.

ಈ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ರಾಜ್ಯ ಹೈಕೋರ್ಟ್‌ ಕದ ಬಡಿದಿದ್ದರು. ಆರೋಪಗಳು ಗಂಭೀರವಾಗಿದ್ದು, ವಿಚಾರಣಾಧೀನ ನ್ಯಾಯಾಲಯದ ಆದೇಶದಲ್ಲಿ ತನ್ನ ಮಧ್ಯಪ್ರವೇಶದ ಅಗತ್ಯವಿಲ್ಲ ಎಂದಿತ್ತು ರಾಜ್ಯ ಹೈಕೋರ್ಟ್‌. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X