ಕೆ.ಸಿ ಜನರಲ್ ಆಸ್ಪತ್ರೆ | ಶೀಘ್ರದಲ್ಲಿಯೇ ಟ್ರಾಮಾ ಕೇರ್ ಸೆಂಟರ್‌ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

Date:

Advertisements
  • ಆಸ್ಪತ್ರೆಯ ಸಮಸ್ಯೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ
  • ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರದ ಸಮಸ್ಯೆ ಇದೆ

ರಾಜ್ಯ ರಾಜಧಾನಿ ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಕೆ.ಸಿ ಜನರಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಟ್ರಾಮಾ ಕೇರ್ ಸೆಂಟರ್‌ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದರು.

ಬೆಂಗಳೂರಿನ ಕೆ.ಸಿ ಜನರಲ್ ಸಾರ್ವಜನಿಕ ಆಸ್ಪತ್ರೆಗೆ ಸಚಿವ ದಿನೇಶ್ ಗುಂಡುರಾವ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಕೆ.ಸಿ ಜನರಲ್ ಆಸ್ಪತ್ರೆ ಕೂಡ ಒಂದಾಗಿದೆ. ಈ ಆಸ್ಪತ್ರೆಯಲ್ಲಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭೇಟಿ ನೀಡಿದ್ದೇನೆ. ಈ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಟ್ರಾಮಾ ಕೇರ್ ಸೆಂಟರ್ ನಿರ್ಮಾಣವಾಗಲಿದೆ” ಎಂದು ಹೇಳಿದರು.  

Advertisements

“ಶವಾಗಾರ ತೆರೆಯುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರದ ಸಮಸ್ಯೆ ಇದೆ. ರಾಜ್ಯದಾದ್ಯಂತ ಸಿಂಗಲ್ ಯುಸ್ ಡಯಾಲಿಸ್ ಕೇಂದ್ರಗಳನ್ನು ಮಾಡುವ ನಿರ್ಧಾರ ತೆಗೆದುಕೊಂಡಿದ್ದೇವೆ. ಐಸಿಯು ಯುನಿಟ್ಸ್‌ ಪರಿಶೀಲಿಸಲಾಗಿದ್ದು, ಕೆಲವು ಭಾಗದಲ್ಲಿ ಲೀಕೇಜ್ ಆಗುತ್ತಿದೆ. ಅವುಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗ್ರಾಹಕರೇ ನಕಲಿ ಬಿಲ್‌ ಬಗ್ಗೆ ಎಚ್ಚರವಿರಲಿ ಎಂದ ಬೆಸ್ಕಾಂ

“ಕೆ.ಸಿ ಜನರಲ್ ಆಸ್ಪತ್ರೆಗೆ ಸಾಕಷ್ಟು ಜನ ಭೇಟಿ ನೀಡುತ್ತಾರೆ. ಹೀಗಾಗಿ, ಆಸ್ಪತ್ರೆಯ ಸಮಸ್ಯೆಗಳನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇನ್ನೂ ಆಸ್ಪತ್ರೆಯಲ್ಲಿ ಎಲ್ಲ ಔಷಧಗಳನ್ನು ನೀಡಬೇಕು. ಯಾವುದೇ ಔಷಧವನ್ನು ಹೊರಗಡೆ ಬರೆಯಬಾರದು” ಎಂದು ಸಚಿವರು ಸೂಚನೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X