ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ಬಳಿಕ, ದೆಹಲಿ ಮುಖ್ಯಮಂತ್ರಿ ಕಚೇರಿಯಲ್ಲಿದ್ದ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರು ಫೋಟೋಗಳನ್ನು ತೆಗೆದುಹಾಕಿದೆ. ಈ ಫೋಟೋಗಳಿದ್ದ ಜಾಗದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪತಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಫೋಟೋಗಳನ್ನು ಹಾಕಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಆದರೆ, ಎಎಪಿಯ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಮುಖ್ಯಮಂತ್ರಿ ಕಚೇರಿಯಲ್ಲಿವೆ ಎಂದು ಹೇಳಿದೆ.
ಫೋಟೋ ತೆರವು ಕುರಿತು ದೆಹಲಿ ವಿಧಾನಸಭೆಯ ವಿಪಕ್ಷ ನಾಯಕಿ, ಮಾಜಿ ಮುಖ್ಯಮಂತ್ರಿ ಆತಿಶಿ ಅವರು ಫೋಟೋವೊಂದನ್ನು ಟ್ವೀಟ್ ಮಾಡಿದ್ದು, “ದೆಹಲಿ ಮುಖ್ಯಮಂತ್ರಿ ಕಚೇರಿಯಿಂದ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಫೋಟೋಗಳನ್ನು ಬಿಜೆಪಿ ತೆಗೆದುಹಾಕಿದೆ. ತನ್ನ ‘ದಲಿತ ವಿರೋಧಿ” ಮತ್ತು ‘ಸಿಖ್ ವಿರೋಧಿ’ ಧೋರಣೆಯನ್ನು ತೋರಿಸಿದೆ” ಎಂದು ಆರೋಪಿಸಿದ್ದಾರೆ.
“ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಎಲ್ಲರಿಗೂ ತಿಳಿದಿದೆ. ಇಂದು, ಅದರ ದಲಿತ ವಿರೋಧಿ ಮನಸ್ಥಿತಿಗೆ ಪುರಾವೆ ನೀಡಲಾಗಿದೆ. ಕೇಜ್ರಿವಾಲ್ ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಯಲ್ಲೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಶಹೀದ್ ಭಗತ್ ಸಿಂಗ್ ಅವರ ಫೋಟೋಗಳನ್ನು ಇರಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಈ ಎರಡೂ ಫೋಟೋಗಳನ್ನು ಮುಖ್ಯಮಂತ್ರಿ ಕಚೇರಿಯಿಂದ ತೆಗೆದುಹಾಕಲಾಗಿದೆ” ಎಂದು ಆರೋಪಿಸಿದ್ದಾರೆ.
दिल्ली की नई बीजेपी सरकार ने बाबा साहेब की फोटो हटाकर प्रधान मंत्री मोदी जी की फोटो लगा दी। ये सही नहीं है। इस से बाबा साहेब के करोड़ो अनुयायियों को ठेस पहुँची है।
— Arvind Kejriwal (@ArvindKejriwal) February 24, 2025
मेरी बीजेपी से प्रार्थना है। आप प्रधान मंत्री जी की फोटो लगा लीजिए लेकिन बाबा साहिब की फोटो तो मत हटाइए। उनकी फोटो… https://t.co/k9A2HKFECV
ಇನ್ನು, ಅರವಿಂದ್ ಕೇಜ್ರಿವಾಲ್ ಕೂಡ ಟ್ವೀಟ್ ಮಾಡಿದ್ದು, “ದೆಹಲಿಯ ಹೊಸ ಬಿಜೆಪಿ ಸರ್ಕಾರ ಬಾಬಾ ಸಾಹೇಬರ ಫೋಟೋವನ್ನು ತೆಗೆದು ಪ್ರಧಾನಿ ಮೋದಿ ಫೋಟೋ ಹಾಕಿದೆ. ಇದು ಸರಿಯಲ್ಲ. ಬಾಬಾ ಸಾಹೇಬರ ಲಕ್ಷಾಂತರ ಅನುಯಾಯಿಗಳಿಗೆ ನೋವುಂಟು ಮಾಡಿದೆ. ಬಿಜೆಪಿಗೆ ನನ್ನದೊಂದು ವಿನಂತಿ. ನೀವು ಪ್ರಧಾನ ಮಂತ್ರಿಯ ಫೋಟೋ ಹಾಕಬಹುದು, ಆದರೆ ಬಾಬಾ ಸಾಹೇಬರ ಫೋಟೋ ತೆಗೆಯಬೇಡಿ” ಎಂದಿದ್ದಾರೆ.
ಈ ವರದಿ ಓದಿದ್ದೀರಾ?: ಬಿಜೆಪಿಯ ಕರಾಳ ಮುಖ | ರೀಲ್ಸ್ ಮಾಡುವುದು, ಅವಘಡವಾದಾಗ ಅಳಿಸಲು ನೋಟಿಸ್ ಕೊಡುವುದು!
ಎಎಪಿ ಹೇಳಿಕೆಯನ್ನು ಬಿಜೆಪಿ ನಿರಾಕಿಸಿದೆ. ಮತ್ತೊಂದು ಚಿತ್ರವನ್ನು ಹಂಚಿಕೊಂಡಿರುವ ಬಿಜೆಪಿ, ಮುಖ್ಯಮಂತ್ರಿ ಕುರ್ಚಿಯ ಹಿಂದಿನ ಗೋಡೆಯಲ್ಲಿದ್ದ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಫೋಟೋಗಳನ್ನು ಪಕ್ಕದ ಗೋಡೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿಕೊಂಡಿದೆ.
दिल्ली की मुख्यमंत्री श्रीमती @gupta_rekha एवं सभी मंत्रियों के कक्ष में श्रद्धेय महात्मा गांधी जी, बाबा साहेब भीमराव अंबेडकर जी, भगत सिंह जी, महामहिम राष्ट्रपति जी एवं प्रधानमंत्री जी के चित्र सुशोभित हैं। pic.twitter.com/zx6puyqr1w
— BJP Delhi (@BJP4Delhi) February 24, 2025
“ದೆಹಲಿ ಮುಖ್ಯಮಂತ್ರಿ ರಾಖಾ ಗುಪ್ತಾ ಮತ್ತು ಎಲ್ಲ ಮಂತ್ರಿಗಳ ಕೊಠಡಿಗಳಲ್ಲಿ ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಚಿತ್ರಗಳನ್ನು ಇರಿಸಲಾಗಿದೆ” ಎಂದು ಬಿಜೆಪಿ ಹೇಳಿಕೊಂಡಿದೆ.