ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ಪತ್ರಕರ್ತ ಮೊಹಮ್ಮದ್ ಜಿಲಾನಿ ಅವರು ಉರ್ದು ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪ್ರಸ್ತುತ ಡೈಲಿ ಸಲಾರ್ ಉರ್ದು ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಕರ್ತವ್ಯ ಸಲ್ಲಿಸುತ್ತಿರುವ ಇವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉರ್ದು ಭಾಷಾ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ.
ಫೆ.27ರ ಗುರುವಾರದಂದು ಬೆಂಗಳೂರಿನ ಕೆಎಂಡಿಸಿ ಭವನದಲ್ಲಿ ಉರ್ದು ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ | ಅಡ್ಕಸ್ಥಳ ಕಬೀರ್ ಗೆ “ಸಾಹಿತ್ಯ ವಿಭೂಷಣ” ಪ್ರಶಸ್ತಿ
ಚಿಕ್ಕಬಳ್ಳಾಪುರ ಜಿಲ್ಲೆ ಮಾತ್ರವಲ್ಲದೆ ಕರ್ನಾಟಕ ರಾಜ್ಯದ ನಾನಾ ಜಿಲ್ಲೆಗಳ ಪತ್ರಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಜಿಲಾನಿ ಅವರನ್ನು ಸಮುದಾಯದ ಬಂಧುಗಳು ಹಾಗೂ ಜಿಲ್ಲೆಯ ಪತ್ರಕರ್ತ ಮಿತ್ರರು ಅಭಿನಂದಿಸಿದ್ದಾರೆ.