ಸಿಇಟಿ ಫಲಿತಾಂಶ ಪ್ರಕಟ : ಮೇಲುಗೈ ಸಾಧಿಸಿದ ಬಾಲಕಿಯರು

Date:

Advertisements
  • 11 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟ
  • ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಪ್ರಥಮ ಸ್ಥಾನ

2023-24ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಿದ್ದು, ಎಲ್ಲ ವಿಭಾಗಗಳಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 11 ಗಂಟೆ ನಂತರ ವೆಬ್‌ಸೈಟ್‌ ಮೂಲಕ ಸಂಪೂರ್ಣ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

2023ರ ಮೇ 20 ಮತ್ತು ಮೇ 21 ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 2,44,345 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ & ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್,​ ಬಿಎಸ್‌ಸಿ ನರ್ಸಿಂಗ್​ಗೆ ಪ್ರವೇಶ ಪರೀಕ್ಷೆ ನಡೆದಿತ್ತು.

ಪರೀಕ್ಷೆಗೆ ಹಾಜರಾಗಿದ್ದ 2,44,345 ವಿದ್ಯಾರ್ಥಿಗಳಲ್ಲಿ ಎಂಜಿನಿಯರ್ ಕೋರ್ಸ್‌ಗೆ 2,03,381, ಕೃಷಿ ವಿಜ್ಞಾನಕ್ಕೆ 1,64,187, ಪಶುಸಂಗೋಪನೆಗೆ 1,66,756, ಯೋಗ ಮತ್ತು ನ್ಯಾಚುರೋಪತಿಗೆ 1,66,746, ಬಿ ಫಾರ್ಮಾಕ್ಕೆ 2,06,191 ಹಾಗೂ 2,06,340 ವಿದ್ಯಾರ್ಥಿಗಳು ಡಿ ಫಾರ್ಮಾ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ.

Advertisements

ಈ ಬಾರಿ ಸಿಇಟಿಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ​ ವಿಘ್ನೇಶ್​ ಪ್ರಥಮ ಸ್ಥಾನ ಪಡೆದಿದ್ದರೆ, ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಲಾಗಿದೆ. ಜೂನ್ 15ರ ಬೆಳಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ಸಿಇಟಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೆ.ಸಿ ಜನರಲ್ ಆಸ್ಪತ್ರೆ | ಶೀಘ್ರದಲ್ಲಿಯೇ ಟ್ರಾಮಾ ಕೇರ್ ಸೆಂಟರ್‌ ನಿರ್ಮಾಣ: ಸಚಿವ ದಿನೇಶ್ ಗುಂಡೂರಾವ್

ಈ ಹಿಂದೆ ಜೂನ್ 12 ರಂದು ಸಿಇಟಿ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿತ್ತು. ಆದರೆ ಸುಮಾರು 30 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ವಿವರಗಳಲ್ಲಿ ಹೊಂದಾಣಿಕೆಯಾಗದ ಕಾರಣ ಫಲಿತಾಂಶದ ದಿನಾಂಕವನ್ನು ಮುಂದೂಡಲಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X