ಮಣಿಪುರ ಸಚಿವೆ ನಿವಾಸಕ್ಕೆ ಬೆಂಕಿ: ಭದ್ರತಾ ಪಡೆಯಿಂದ ಶೋಧ ಕಾರ್ಯ

Date:

Advertisements
  • ಮಣಿಪುರದ ಏಕೈಕ ಮಹಿಳಾ ಸಚಿವರಾಗಿರುವ ನೆಮ್ಚಾ ಕಿಪ್‌ಗೆನ್
  • ಮೇತೀ ಹಾಗೂ ಕುಕಿ ಸಮುದಾಯ ಮಧ್ಯೆ ನಡೆಯುತ್ತಿರುವ ಹಿಂಸಾಚಾರ

ಮಣಿಪುರ ರಾಜ್ಯದ ಪಶ್ಚಿಮ ಇಂಫಾಲ ಜಿಲ್ಲೆಯ ಲ್ಯಾಂಫೆಲ್ ನಲ್ಲಿರುವ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್‌ಗೆನ್‌ ಅವರ ಅಧಿಕೃತ ನಿವಾಸಕ್ಕೆ ಬುಧವಾರ (ಜೂನ್ 14) ರಾತ್ರಿ ಅಪರಿಚಿತರು ಬೆಂಕಿ ಹಚ್ಚಿರುವುದಾಗಿ ವರದಿಯಾಗಿದೆ.

ಪೂರ್ವ ಇಂಫಾಲದ ಖಾಮೆಲಾಕ್ ಗ್ರಾಮದಲ್ಲಿ ಬುಧವಾರ ಶಂಕಿತ ಭಯೋತ್ಪಾದಕರು ನಡೆಸಿದ ದಾಳಿ ವೇಳೆ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಈ ಘಟನೆ ಬೆನ್ನಿಗೇ ನೆಮ್ಚಾ ಕಿಪ್‌ಗೆನ್‌ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದವರೇ ಈ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ಭದ್ರತಾ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ನೆಮ್ಚಾ ಕಿಪ್‌ಗೆನ್‌ ಅವರು ಘಟನೆ ನಡೆದಾಗ ನಿವಾಸದಲ್ಲಿ ಇರಲಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಚಿವೆ ಕಿಪ್‌ಗೆನ್‌ ಕುಕಿ ಸಮುದಾಯದ ನಾಯಕಿಯಾಗಿದ್ದಾರೆ. ನಿವಾಸದಲ್ಲಿ ಯಾರೂ ಇಲ್ಲದ ವೇಳೆ ದಾಳಿಕೋರರು ಬೆಂಕಿ ಹಚ್ಚಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಯಾವುದೇ ಸಂಘಟನೆ ಘಟನೆಯ ಹೊಣೆ ಹೊತ್ತುಕೊಂಡಿಲ್ಲ.

ಮಣಿಪುರದಲ್ಲಿ ಮೇತೀ ಮತ್ತು ಕುಕಿ ಸಮುದಾಯದ ನಡುವೆ ಒಂದು ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 310 ಜನರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಸೇನೆ ಮತ್ತು ಅರೆ ಪಡೆಗಳನ್ನು ನಿಯೋಜಿಸಲಾಗಿದೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೇಟಿ ಸಮುದಾಯ ಮೇ 3ರಂದು ಮೆರವಣಿಗೆ ಆಯೋಜಿಸಿತ್ತು. ಆ ಬಳಿಕ ಮಣಿಪುರದಲ್ಲಿ ಘರ್ಷಣೆಗಳು ಭುಗಿಲೆದ್ದಿವೆ.

ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟಿರುವ ಮೇಟಿ ಸಮುದಾಯ, ಇಂಫಾಲದ ಕಣಿವೆಗಳಲ್ಲಿ ಹೆಚ್ಚಾಗಿ ನೆಲೆಸಿವೆ. ಬುಡಕಟ್ಟು ಜನಾಂಗಗಳಾದ ನಾಗಾಗಳು ಮತ್ತು ಕುಕಿಗಳು ಶೇಕಡಾ 40 ರಷ್ಟಿದ್ದು, ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಫೇಸ್‌ಬುಕ್ ಲೈವ್‌ನಲ್ಲಿ ಹಾಸ್ಯನಟ ತೀರ್ಥಾನಂದ್ ರಾವ್ ಆತ್ಮಹತ್ಯೆಗೆ ಯತ್ನ

ನೆಮ್ಚಾ ಕಿಪ್‌ಗೆನ್‌ ಅವರು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರ 12 ಸದಸ್ಯರ ಸಚಿವ ಸಂಪುಟದಲ್ಲಿ ಕಿಪ್ಗೆನ್ ಅವರು ಏಕೈಕ ಮಹಿಳಾ ಸಚಿವೆಯಾಗಿದ್ದಾರೆ.

ಕುಕಿ ಸಮುದಾಯಕ್ಕೆ ಪ್ರತ್ಯೇಕ ಆಡಳಿತ ಕೋರಿದ್ದ ಬಿಜೆಪಿಯ ಏಳು ಸೇರಿ ಕುಕಿ ಸಮುದಾಯದ 10 ಶಾಸಕರಲ್ಲಿ ಕಿಪ್ಗೆನ್ ಅವರು ಒಬ್ಬರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

Download Eedina App Android / iOS

X