ಅಪರಾಧಿಗಳು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧಕ್ಕೆ ಕೇಂದ್ರದ ವಿರೋಧ

Date:

Advertisements

ಕ್ರಿಮಿನಲ್ ಅಪರಾಧಗಳಲ್ಲಿ ಶಿಕ್ಷೆಗೊಳಗಾದವರು ಸಂಸತ್ತು ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಆಜೀವ ನಿಷೇಧ ಹೇರಲು ಕೋರಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ಅರ್ಜಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿದೆ.

ಹಾಗೆ ನಿಷೇಧ ವಿಧಿಸುವುದು ಸಂಸತ್ತಿನ ವಿವೇಚನೆಗೆ ಬಿಟ್ಟದ್ದೇ ವಿನಾ ನ್ಯಾಯಾಂಗಕ್ಕಲ್ಲ. ಪ್ರಮಾಣಾನುಗುಣತೆ ಮತ್ತು ಸಮಂಜಸತೆಯ ತತ್ವಗಳ ಆಧಾರದ ಮೇಲೆ ಸಂಸತ್ತು ಅಂತಹ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅದು ತಿಳಿಸಿದೆ.

ಆಜೀವ ನಿಷೇಧ ಸೂಕ್ತವೇ ಅಥವಾ ಇಲ್ಲವೇ ಎಂಬುದು ಸಂಸತ್ತಿನ ವ್ಯಾಪ್ತಿಗಷ್ಟೇ ಒಳಪಡುವ ವಿಚಾರವಾಗಿದ್ದು ನಿಷೇಧ ಸೂಕ್ತ ಅಥವಾ ಅಲ್ಲ ಎನ್ನುವುದು ಅರ್ಜಿದಾರರಿಗೆ ಸಂಬಂಧಿಸಿದ್ದಲ್ಲ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.

Advertisements

“ಕಾನೂನಿನ ವಿಷಯವಾಗಿ, ಯಾವುದೇ ಶಿಕ್ಷೆ ವಿಧಿಸುವಾಗ, ಸಂಸತ್ತು ಪ್ರಮಾಣಾನುಗುಣತೆ ಮತ್ತು ಸಮಂಜಸತೆಯ ತತ್ವಗಳನ್ನು ಪರಿಗಣಿಸಲು ಯತ್ನಿಸುತ್ತದೆ” ಎಂದು ಅಫಿಡವಿಟ್‌ನಲ್ಲಿ ಹೇಳಲಾಗಿದೆ.

ಜನ ಪ್ರತಿನಿಧಿಗಳ ಕಾಯಿದೆಯ ಸೆಕ್ಷನ್ 8 ಮತ್ತು 9ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಬಿಜೆಪಿ ನಾಯಕ ಹಾಗೂ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಈ ಪ್ರತಿಕ್ರಿಯೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

ಶಿಕ್ಷೆಗೊಳಗಾದ ರಾಜಕಾರಣಿಗಳು ಶಿಕ್ಷೆಯ ಅವಧಿ ಮುಗಿದ ನಂತರ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಕಾಯಿದೆಯ ಸೆಕ್ಷನ್ 8 ನಿಷೇಧಿಸುತ್ತದೆ. ಇದು ಕೆಲವು ವರ್ಗೀಕೃತ ಅಪರಾಧಗಳಿಗೆ ಮತ್ತು ಎರಡು ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುವ ಯಾವುದೇ ಕೃತ್ಯಕ್ಕೆ ಅನ್ವಯವಾಗುತ್ತದೆ.

ಭ್ರಷ್ಟಾಚಾರ ಅಥವಾ ದೇಶದ್ರೋಹದ ಕಾರಣದಿಂದಾಗಿ ಸರ್ಕಾರಿ ಉದ್ಯೋಗಗಳಿಂದ ವಜಾಗೊಂಡ ವ್ಯಕ್ತಿಗಳು, ವಜಾಗೊಂಡ ದಿನದಿಂದ ಐದು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಕಾಯಿದೆಯ ಸೆಕ್ಷನ್ 9 ತಡೆಯುತ್ತದೆ.

ಶಿಕ್ಷೆಗೊಳಗಾದ ಶಾಸಕರ ಅನರ್ಹತೆಯ ಅವಧಿಯನ್ನು ಆರು ವರ್ಷಗಳಿಗೆ ಸೀಮಿತಗೊಳಿಸುವುದರ ಹಿಂದಿನ ತಾರ್ಕಿಕತೆಯ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡುವಂತೆ ಫೆಬ್ರವರಿ 10 ರಂದು, ನ್ಯಾಯಮೂರ್ತಿ ದೀಪಂಕರ್ ದತ್ತ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಸೂಚಿಸಿತ್ತು. ಕಾನೂನು ಉಲ್ಲಂಘಿಸುವವರನ್ನು ಕಾನೂನು ರೂಪಿಸುವವರನ್ನಾಗಿ ಮಾಡುವುದು “ಸ್ಪಷ್ಟ ಹಿತಾಸಕ್ತಿ ಸಂಘರ್ಷ” ಎಂದು ಅದು ಆಗ ಹೇಳಿತ್ತು.

ಆದರೆ ಕಾಯಿದೆಯಡಿ ಶಿಕ್ಷೆ ವಿಧಿಸುವುದು, ಸಮಯ ಅಥವಾ ಪ್ರಮಾಣಾನುಗುಣಕ್ಕೆ ಸಂಬಂಧಿಸಿದ್ದರಿಂದ ಆಜೀವ ನಿಷೇಧ ಸೂಕ್ತವಲ್ಲ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X