ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ನಾಯಿಗಳ ದಾಳಿಯಿಂದ ಬರೋಬ್ಬರಿ 43 ಕುರಿಗಳು ಸಾವನ್ನಪ್ಪಿದ್ದು, ಸುಮಾರು 7 ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬೂದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾಗಮ್ಮ-ಶಿವಣ್ಣ ಎಂಬುವವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ನೆನ್ನೆ ರಾತ್ರಿ ರೊಪ್ಪದಲ್ಲಿ ಕೂಡಿದ್ದ ಕುರಿಗಳ ಮೇಲೆ ಬೀದಿ ನಾಯಿಗಳ ಹಿಂಡು ಏಕಾಏಕಿ ದಾಳಿ ಮಾಡಿವೆ. ಕುರಿಗಳ ಕತ್ತು, ಹೊಟ್ಟೆ ಸೇರಿದಂತೆ ದೇಹದ ಹಲವು ಭಾಗಕ್ಕೆ ತೀವ್ರವಾಗಿ ಕಡಿದಿವೆ. ಗಂಭೀರವಾಗಿ ಗಾಯಗೊಂಡ ಕುರಿಗಳು ಸಾವನ್ನಪ್ಪಿವೆ.
ಇದನ್ನೂ ಓದಿ: ಮಧುಗಿರಿ | ಗೃಹ ಸಚಿವರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ ಮರೀಚಿಕೆ : ಗ್ರಾಪಂಗೆ ಬೀಗ ಹಾಕಿ ಬಟ್ಟಗೆರೆ ಗ್ರಾಮಸ್ಥರ ಪ್ರತಿಭಟನೆ
ಇಷ್ಟೊಂದು ಕುರಿಗಳ ಸಾವಿನಿಂದ ರೈತ ಶಿವಣ್ಣನಿಗೆ ಅಪಾರ ನಷ್ಟವಾಗಿದ್ದು, ಪರಿಹಾರ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನು ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
