ಕೊಪ್ಪಳ | ಮಹಾನ್ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್‌ರ 94ನೇ ಹುತಾತ್ಮ ದಿನಾಚರಣೆ

Date:

Advertisements

ಕೊಪ್ಪಳದ ಎಐಡಿಎಸ್‌ಒ ಹಾಗೂ ಎಐಡಿವೈಒ ನೇತೃತ್ವದಲ್ಲಿ ನಗರದ ಆಜಾದ್ ವೃತ್ತದ ಬಳಿ ಮಹಾನ್‌ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ 94ನೇ ಹುತಾತ್ಮ ದಿನಾಚರಣೆಯನ್ನು ಆಚರಿಸಿದರು.

ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿ, “ಆಜಾದ್‌ರವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಂದಿರುವಂತಹ ಮಹಾನ್ ಕ್ರಾಂತಿಕಾರಿಯಾಗಿದ್ದು, ರಾಜಿರಹಿತ ಹೋರಾಟವನ್ನು ಮಾಡುವ ಮೂಲಕ ಸ್ವಾತಂತ್ರ್ಯ ನಂತರ ಭಾರತದಲ್ಲಿ ಸಮಸಮಾಜದ ಕನಸು ಕಂಡಂತಹ ಮಹಾನ್ ಹೋರಾಟಗಾರರಾಗಿದ್ದರು. ಹಲವಾರು ಕ್ರಾಂತಿಕಾರಿ ಸಂಘಟನೆಗಳಲ್ಲಿ ಭಾಗವಹಿಸುವ ಮೂಲಕ ಭಗತ್ ಸಿಂಗ್ ಅವರ ಜೊತೆಗೂಡಿ ಸಾಮಾಜಿಕ ಕ್ರಾಂತಿಯ ಮೂಲಕವಾಗಿ ಜಾತಿ ವ್ಯವಸ್ಥೆ, ಧಾರ್ಮಿಕ ಸಮಸ್ಯೆ, ಆರ್ಥಿಕ ಅಸಮಾನತೆಗಳ ನಿರ್ಮೂಲನೆಗೆ ರಾಜಿ ಇಲ್ಲದೆ ನಿರಂತರ ಹೋರಾಟ ಮಾಡಿರುವ ಮಹಾನ್ ವ್ಯಕ್ತಿ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಬೇಸಿಗೆ ಆರಂಭಕ್ಕೂ ಮುನ್ನವೇ ಕಲ್ಪತರು ನಾಡಿನಲ್ಲಿ ಎಳನೀರಿಗೆ ಭಾರೀ ಡಿಮ್ಯಾಂಡ್

Advertisements

ಈ ಸಂದರ್ಭದಲ್ಲಿ ಎಐಡಿವೈಒ ರಾಜ್ಯ ಮುಖಂಡ ಶರಣು ಗಡ್ಡಿ, ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ, ಸದಾಶಿವ ಮುನಿರಾಬಾದ್, ಹಿರಿಯರಾದ ಈಶ್ವರಪ್ಪ ದಿನ್ನಿ, ಶಿವಪ್ಪ ಹಡಪದ್, ಮಕ್ಬಲ್ ಕೊಪ್ಪಳ ವಿಜಯಕುಮಾರ್ ಬ್ಯಾಳಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X