- ಜೂನ್ 15ರಿಂದ ಜೂನ್ 30ರವರೆಗೆ ಸಮಯಾವಕಾಶ ವಿಸ್ತರಣೆ ಮಾಡಿ ಆದೇಶ
- ಶಕ್ತಿಯೋಜನೆಯಡಿ ವಿದ್ಯಾರ್ಥಿನಿಯರು ಪ್ರಯಾಣಿಸುವಾಗ ಗುರುತಿನ ಚೀಟಿ ತೋರಿಸಿ
ಜೂನ್ 15 ರವರೆಗೆ ವಿದ್ಯಾರ್ಥಿಗಳಿಗೆ ನೀಡಿದ್ದ ಉಚಿತ ಬಸ್ ಪ್ರಯಾಣದ ಗಡುವನ್ನು ಜೂನ್ 30ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸುತ್ತೋಲೆ ಹೊರಡಿಸಿದೆ.
ಶೈಕ್ಷಣಿಕ ವರ್ಷ ಆರಂಭವಾದ ಹಿನ್ನೆಲೆ, ರಾಜ್ಯದಲ್ಲಿ ವಿದ್ಯಾರ್ಥಿಗಳು ಶಾಲೆ/ಕಾಲೇಜುಗಳಿಗೆ ಓಟಾಟ ಆರಂಭಿಸಿದ್ದಾರೆ. ವಿದ್ಯಾರ್ಥಿಗಳು ಸೇವಾ ಸಿಂಧು ತಂತ್ರಾಶದ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯಬಹುದು. ಇದಕ್ಕಾಗಿ ಜೂನ್ 15ರವರೆಗೆ ಉಚಿತವಾಗಿ ವಿದ್ಯಾರ್ಥಿಗಳಿಗೆ ಓಡಾಡಲು ನಿಗಮ ಅವಕಾಶ ನೀಡಿತ್ತು.
ಪಾಸ್ ಪಡೆಯಲು ವಿದ್ಯಾರ್ಥಿಗಳಿಗೆ ಇನ್ನಷ್ಟು ಕಾಲಾವಕಾಶ ಬೇಕಾಗಿರುವುದನ್ನು ಅರಿತ ನಿಗಮ ಜೂನ್ 15ರಿಂದ ಜೂನ್ 30ರವರೆಗೆ ಸಮಯಾವಕಾಶವನ್ನು ವಿಸ್ತರಣೆ ಮಾಡಿ ಆದೇಶಿಸಿದೆ.
ಈ ಸುದ್ದಿ ಓದಿದ್ದೀರಾ? ಸಿಇಟಿ ಫಲಿತಾಂಶ ಪ್ರಕಟ : ಮೇಲುಗೈ ಸಾಧಿಸಿದ ಬಾಲಕಿಯರು
ವಿದ್ಯಾರ್ಥಿಗಳು ಈ ಹಿಂದೆ ನೀಡಿರುವ ಬಸ್ ಪಾಸ್ ಜತೆಗೆ ಪ್ರಸಕ್ತ ವರ್ಷದ ಶಾಲಾ ಅಥವಾ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಂಡ ಸಂದರ್ಭದಲ್ಲಿ ನೀಡಲಾಗಿರುವ ರಶೀದಿಯನ್ನು ತೋರಿಸಿ ಬಸ್‌ನಲ್ಲಿ ಪ್ರಯಾಣಿಸಬಹುದಾಗಿದೆ. ವಿದ್ಯಾರ್ಥಿಗಳು ಜೂನ್ 12 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಪಾಸ್‌ಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರು ರಾಜ್ಯದೊಳಗೆ ಪ್ರಯಾಣಿಸುವಾಗ ಗುರುತಿನ ಚೀಟಿ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.