ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್

Date:

Advertisements

ಪೋಕ್ಸೊ ಪ್ರಕರಣದಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್ 15ರಂದು ನಿಗದಿಪಡಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ ಬಿ ಎಸ್ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ.

ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದೆಯಷ್ಟೆ ಕರ್ನಾಟಕ ಹೈಕೋರ್ಟ್​ನಲ್ಲಿ ಪರಿಹಾರ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ.

ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್​ನಲ್ಲಿ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿ ಈ ಆರೋಪ ಮಾಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತಮಿಳುನಾಡಿನಲ್ಲಿ ಸದ್ದು ಮಾಡುತ್ತಿರುವ ವಿಜಯ್ ಮತ್ತು #GetOut ಫಲಕಗಳು

ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳಿಗೆ ಯಡಿಯೂರಪ್ಪ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸದಾಶಿವನಗರ ಠಾಣೆಗೆ ದೂರು ನೀಡಲಾಗಿತ್ತು.

ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಪೋಕ್ಸೊ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದು ಕೆಲವು ದಿನಗಳ ಮಟ್ಟಿಗೆ ರಾಜಕೀಯವಾಗಿಯೂ ಸದ್ದು ಮಾಡಿತ್ತು. ಏತನ್ಮಧ್ಯೆ, ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ 2024ರ ಮೇ ತಿಂಗಳಲ್ಲಿ ಮೃತಪಟ್ಟಿದ್ದರು.

ಇದೀಗ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿರುವುದರಿಂದ ಯಡಿಯೂರಪ್ಪನವರು ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X