ಹಿಂದುಗಳ ಧಾರ್ಮಿಕ ಸ್ಥಳವಾಗಿರುವ ಉತ್ತರಾಖಂಡದ ಬದ್ರಿನಾಥದಲ್ಲಿ ಭಾರೀ ಹಿಮಪಾತ ಸಂಭವಿಸಿದ್ದು, ಹಿಮದಡಿ ಸುಮಾರು 57ಕ್ಕೂ ಹೆಚ್ಚು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂಧು ವರದಿಯಾಗಿದೆ.
ಬದ್ರಿನಾಥದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಮಪಾತ ಸಂಭವಿಸಿದೆ. ಖಾಸಗಿ ಕಂಪನಿಯೊಂದರ ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ. ಹಿಮದಡಿ ಸಿಲುಕಿರುವ ಕಾರ್ಮಿಕರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಈವರೆಗೆ, 15 ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ರಾಜ್ಯ ವಿಪ್ಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ರಾಷ್ಟ್ರೀಯ ವಿಪ್ಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ), ಬಾರ್ಡರ್ ರೂಟರ್ಸ್ ಆರ್ಗನೈಜೇಷನ್ (ಬಿಅರ್‌ಒ)ಗಳು ಜಂಟಿಯಾಗಿ ರಕ್ಷಣಾ ಕಾರ್ಯಚರಣೆ ನಡೆಸುತ್ತಿವೆ.
ಭಾರೀ ಬಿಸಿಲಿಗೆ ಹಿಮಪಾತವಾಗುತ್ತಿದ್ದು, ಶುಕ್ರವಾರ ರಾತ್ರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬದ್ರಿನಾಥ ಸುತ್ತಮುತ್ತ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.