ಕೊಪ್ಪಳ | ಬಾಲ್ಯ ವಿವಾಹ: ವರ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು

Date:

Advertisements

ಕೊಪ್ಪಳ ಜಿಲ್ಲೆ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ವಿವಾಹ ಮಾಡಿಕೊಂಡ ದೇವರಾಜ ಹೊಸಕೇರಿ ಸೇರಿದಂತೆ ಆತನ ಹಾಗೂ ಬಾಲಕಿಯ ಪೋಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅಂಗನವಾಡಿ ಮೇಲ್ವಿಚಾರಕಿ ನೀಡಿದ ದೂರಿನ ಅನ್ವಯ ಆರೋಪಿಗಳ ವಿರುದ್ಧ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಫೆ. 25ರಂದು ಜಿಲ್ಲಾ ಮಕ್ಕಳ ಸಹಾಯವಾಣಿಯಿಂದ ಮಾಹಿತಿ ಬಂದಿತ್ತು. ಹಾಗಾಗಿ ಬುಧವಾರ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಎಫ್‌ಐಆರ್‌ದಲ್ಲಿ ವಿವರಿಸಲಾಗಿದೆ.

ಈ ಕುರಿತು ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾದ ವರದಿಯೊಂದಿಗೆ ಫೇಸ್‌ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

“ಬಾಲ್ಯ ವಿವಾಹ ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದರೂ ಅದನ್ನು ತಡೆಯುವಲ್ಲಿ ವಿಫಲರಾಗಿರುವ ಸಂಬಂಧಿಸಿದ ಅಧಿಕಾರಿಗಳಿಗೆ ನಾಚಿಕೆಯಾಗಬೇಕು, ಕರ್ತವ್ಯಲೋಪ ಎಸಗಿರುವವರ ವಿರುದ್ಧ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ಮಹಾನ್ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್‌ರ 94ನೇ ಹುತಾತ್ಮ ದಿನಾಚರಣೆ

ಈ ಪ್ರಕರಣ ಕುರಿತು ಮಾಹಿತಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ ರಾಮತ್ನಾಳ, “ಬಾಲ್ಯ ವಿವಾಹ ತಡೆಗಟ್ಟುವಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಇಒ, ಪಿಡಿಒ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮುಖ್ಯಶಿಕ್ಷಕರು ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತಾಲೂಕು ಮಟ್ಟದ ವ್ಯಾಟ್ಸ್ ಆ್ಯಪ್ ಗ್ರೂಪ್ ರಚಿಸಲಾಗಿದೆ. ಅದರಲ್ಲಿ ಮಾಹಿತಿ ಹಂಚಿಕೆಯಾಗಿರುತ್ತದೆ. ಬಾಲ್ಯವಿವಾಹಕ್ಕೂ ಮೊದಲೇ ಆ ಗುಂಪಿಗೆ ತಿಳಿಸಿರುವ ಮಾಹಿತಿ ಇದ್ದು, ಅದನ್ನು ಪರಿಶೀಲಿಸಲಾಗುವುದು. ಕರ್ತವ್ಯಲೋಪ ಎಸಗಿರುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು” ಎಂದು ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X