ಕೊಲೆ ಪ್ರಕರಣ | ದೇಶಾದ್ಯಂತ ಸಂಚರಿಸಲು ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ಅನುಮತಿ

Date:

Advertisements

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ದೇಶಾದ್ಯಂತ ಪ್ರಯಾಣಿಸಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಈ ಹಿಂದೆ, ಬೆಂಗಳೂರು ಬಿಟ್ಟು ಹೊರಹೋಗದಂತೆ ಸೆಷನ್ ಕೋರ್ಟ್‌ ವಿಧಿಸಿದ್ದ ನಿರ್ಬಂಧವನ್ನು ರದ್ದುಗೊಳಿಸಿದೆ.

ವಿಚಾರಣೆಯಲ್ಲಿರುವ ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಕೂಡ ವಿಚಾರಣೆ ನಡೆಸುತ್ತಿದೆ. ಹೀಗಾಗಿ, ದರ್ಶನ್‌ ದೆಹಲಿ ಮತ್ತು ಇತರ ಸ್ಥಳಗಳಿಗೆ ಪ್ರಯಾಣಿಸಬೆಕಾಗಿದೆ ಎಂದು ದರ್ಶನ್‌ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಆಲಿಸಿರುವ ಹೈಕೋರ್ಟ್‌, ದೇಶಾದ್ಯಂತ ಸಂಚರಿಸಲು ದರ್ಶನ್‌ಗೆ ಅವಕಾಶ ನೀಡಿದೆ.

ಎರಡು-ಮೂರು ತಿಂಗಳುಗಳ ಹಿಂದೆ ದರ್ಶನ್‌ ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದರು. ಬಳಿಕ, ಪ್ರಕರಣ ಮತ್ತೋರ್ವ ಪ್ರಮುಖ ಆರೋಪಿ ಪವಿತ್ರಾ ಗೌಡ ಸೇರಿದಂತೆ ಎಲ್ಲ 16 ಆರೋಪಿಗಳಿಗೂ ಷರತ್ತುಬದ್ದ ಜಾಮೀನು ನೀಡಲಾಗಿತ್ತು

Advertisements

ಪ್ರಕರಣದ ಹಿನ್ನೆಲೆ;

ದರ್ಶನ್ ಪತ್ನಿ ವಿಜಯಲಕ್ಷ್ಮಿ ರೀತಿಯೇ ತಾವು ಐಷಾರಾಮಿ ಜೀವನ ನಡೆಸಬೇಕೆಂದು ಪವಿತ್ರಾ ಬಯಸಿದ್ದರು. ಅದಕ್ಕಾಗಿ, ಐಷಾರಾಮಿ ಕಾರು ಕೊಡಿಸುವಂತೆ ದರ್ಶನ್‌ಗೆ ಪವಿತ್ರಾ ಒತ್ತಡ ಹಾಕುತ್ತಿದ್ದರು. ಮಾತ್ರವಲ್ಲದೆ, ವಿಜಯಲಕ್ಷ್ಮಿ ಜೊತೆ ಪವಿತ್ರಾ ಸಾಮಾಜಿಕ ಜಾಲತಾಣದಲ್ಲಿ ಜಗಳಕ್ಕಿಳಿದಿದ್ದರು. ಹೀಗಾಗಿ, ದರ್ಶನ್‌ ಅಭಿಮಾನಿಗಳು ಪವಿತ್ರಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ವಿಜಯಲಕ್ಷ್ಮಿ ಅವರನ್ನು ಬೆಂಬಲಿಸಿದ ದರ್ಶನ್ ಅಭಿಮಾನಿಯೇ ಆದ ಚಿತ್ರದುರ್ಗದ ರೇಣುಕಸ್ವಾಮಿ ಅವರು ಪವಿತ್ರಾ ಅವರಿಗೆ ಅವಹೇಳನಕಾರಿ ಮತ್ತು ಅಶ್ಲೀಲ ಸಂದೇಶ ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ. ಅದೇ ಕಾರಣಕ್ಕಾಗಿ, ರೇಣುಕಸ್ವಾಮಿಯನ್ನು ಅಪಹರಿಸಿ ಕ್ರೂರವಾಗಿ ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್, ಪವಿತ್ರಾ ಮತ್ತು ಇತರ 15 ಮಂದಿಯನ್ನು 2024ರ ಜೂನ್ 11ರಂದು ಪೊಲೀಸರು ಬಂಧಿಸಿದ್ದರು.

131 ದಿನಗಳನ್ನು ಕಸ್ಟಡಿಯಲ್ಲಿದ್ದ ದರ್ಶನ್‌ಗೆ ಅನಾರೋಗ್ಯದ ಕಾರಣಕ್ಕಾಗಿ 2024ರ ಅಕ್ಟೋಬರ್ 30ರಂದು ಜಾಮೀನು ನೀಡಲಾಗಿದ್ದು, ದರ್ಶನ್‌ ಜೈಲಿನಿಂದ ಹೊರಬಂದಿದ್ದಾರೆ.

ದರ್ಶನ್ ಮತ್ತು ಇತರರಿಗೆ ನೀಡಲಾದ ಜಾಮೀನನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನೆಡಸಿದ್ದ ಸುಪ್ರೀಂ ಕೋರ್ಟ್‌ ಜನವರಿ 24 ರಂದು ದರ್ಶನ್, ಪವಿತ್ರಾ ಮತ್ತು ಇತರ ಐದು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X