ಕುಣಿಗಲ್‌ | ಗಂಡು ಮಗುವಿಗೆ ಜನ್ಮ ನೀಡಿದ 14ರ ಬಾಲಕಿ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

Date:

Advertisements

14 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನಲ್ಲಿ ನಡೆದಿದೆ.

ಬಾಲಕಿ ಎಂಟು ವಾರಗಳ ಗರ್ಭಿಣಿಯಾಗಿದ್ದಾಗಲೇ ಸಂಬಂಧಪಟ್ಟ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಆದರೂ ಯಾವ ಅಧಿಕಾರಿಗಳೂ ಇತ್ತ ಗಮನ ಹರಿಸಿಲ್ಲ. ಪ್ರಕರಣದಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ ಎಂದು ಬಾಲಕಿಗೆ ಪ್ರಸವ ಪೂರ್ವ ಚಿಕಿತ್ಸೆ ನೀಡಿದ್ದ ಆಸ್ಪತ್ರೆ ವೈದ್ಯಾಧಿಕಾರಿಗಳು ಆರೋಪಿಸಿದ್ದಾರೆ.

ಬಾಲಕಿಗೆ ಕಳೆದ ಬುಧವಾರ ಮನೆಯಲ್ಲೇ ಸಹಜ ಹೆರಿಗೆಯಾಗಿದೆ. ಬಳಿಕ ಆಕೆಯ ಆರೋಗ್ಯದಲ್ಲಿ ಆರುಪೇರಾಗಿದ್ದು, ಚಿಕಿತ್ಸೆಗೆ ಎಡೆಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ತಪಾಸಣೆ ವೇಳೆ ವಿಷಯ ಬೆಳಕಿಗೆ ಬಂದಿದೆ.

Advertisements

ಪ್ರಕರಣವನ್ನು ಗಮನಕ್ಕೆ ತಂದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಆರೋಪಿಸಿದ್ದಾರೆ. ಕಳೆದ ವರ್ಷ ಜುಲೈನಲ್ಲಿಯೇ ಪ್ರಕರಣ ಬೆಳಕಿಗೆ ಬಂದರೂ ಡಿಸೆಂಬರ್‌ ಕೊನೆಗೆ ಮಾಹಿತಿ ನೀಡಲಾಗಿದೆ. ಅದಾಗಲೇ ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದಳು ಎಂದು ಉಳಿದ ಇಲಾಖೆಯ ಅಧಿಕಾರಿಗಳು ಪ್ರತ್ಯಾರೋಪ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ, ಎಡೆಯೂರು ವೃತ್ತ ಮೇಲ್ವಿಚಾರಕಿ ಭಾಗ್ಯಲಕ್ಷ್ಮೀ ದೇವಿ ಅವರ ದೂರಿನ ಮೇರೆಗೆ ಬಾಲಕಿಯ ಅಪ್ರಾಪ್ತ ಪತಿ ಹಾಗೂ ಪೋಷಕರ ವಿರುದ್ಧ ಬಾಲ್ಯ ವಿವಾಹ ತಡೆ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯಡಿ ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕುಣಿಗಲ್ ಎಕ್ಸ್‌ಪ್ರೆಸ್ ಕೆನಾಲ್‌ಗೆ ವಿರೋಧ; ಹೋರಾಟದ ಎಚ್ಚರಿಕೆ

ತಾಯಿ ಜೊತೆ ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ, ಅಲ್ಲಿಯೇ ಕೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕನೊಬ್ಬನ್ನು ಪ್ರೀತಿಸುತ್ತಿದ್ದಳು. ಕಳೆದ ವರ್ಷ ಇಬ್ಬರೂ ಅಪ್ರಾಪ್ತರು ಮದುವೆಯಾಗಿದ್ದರು. ಬಾಲಕಿ 5 ತಿಂಗಳ ಗರ್ಭಿಣಿಯಾಗಿದ್ದಾಗ ಬಾಲಕ ಆಕೆಯನ್ನು ತೊರೆದು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X