ಸಂಪುಟ ಸಭೆ | ಮತಾಂತರ ನಿಷೇಧ ಕಾಯ್ದೆ, ಪಠ್ಯಪುಸ್ತಕ ಪರಿಷ್ಕರಣೆ, ಎಪಿಎಂಸಿ ಕಾಯ್ದೆ ರದ್ದು ಮಾಡಲು ತೀರ್ಮಾನ

Date:

Advertisements
  • ಒಟ್ಟು 17 ವಿಚಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ
  • ಹಿಂದಿನ ಸರ್ಕಾರ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದು

ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ್ ತಿಳಿಸಿದರು.

ಗುರುವಾರ ನಡೆದ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಹಿಂದಿನ ಸರ್ಕಾರ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದು ಮಾಡಿ, ಹಿಂದಿನ ಪಠ್ಯವನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಒಟ್ಟು 17 ವಿಚಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಎಚ್‌ ಕೆ ಪಾಟೀಲ್ ವಿವರ ಒದಗಿಸಿದರು.

Advertisements

ಸಂಪುಟ ಸಭೆಯಲ್ಲಿ ಚರ್ಚಿತವಾದ ವಿಚಾರಗಳು

  • ಕರ್ನಾಟಕ ಹೈ ಕೋರ್ಟ್‌ನ ಆಡಳಿತ ವೆಚ್ಚ ಮಿತಿ, ಹಣಕಾಸು ಅಧಿಕಾರ ಹೆಚ್ಚಳ ಮಾಡಲು ಮತ್ತು ಹೆಚ್ಚಿನ ಅಧಿಕಾರಿಗಳ ನಿಯೋಜನೆಗೆ ಒಪ್ಪಿಗೆ.
  • ಕೆಪಿಎಸ್‌ಸಿಯಲ್ಲಿ ಖಾಲಿ ಇರುವ ಮೂರು ಸದಸ್ಯರ ಭರ್ತಿಗೆ ಸಿಎಂಗೆ ಅಧಿಕಾರ.
  • ಕರ್ನಾಟಕ ಮಾಹಿತಿ ತಂತ್ರಜ್ಞಾನ ಬಯೋಟೆಕ್ನಾಲಜಿ, ವಿಜ್ಞಾನ, ತಂತ್ರಜ್ಞಾನ ಇಲಾಖೆಯು ಇಸಿಎಂಎ ಅವರಿಗೆ ಫ್ಲಾಗ್ ಶಿಪ್ ಕಾರ್ಯಕ್ರಮ ಟೆಕ್ ಸಮಿಟ್ (ಇನ್ ಬೆಂಗಳೂರು ಬಿಯಾಂಡ್ ಬೆಂಗಳೂರು) ಮಾಡುವ ಪ್ರಸ್ತಾವನೆಗೆ ಒಪ್ಪಿಗೆ.
  • ಸಂಸದೀಯ ವ್ಯವಹಾರಗಳ ಇಲಾಖೆ ಡಿಸ್ ಕ್ವಾಲಿಫಿಕೇಶನ್ ಆಕ್ಟ್ ತಿದ್ದುಪಡಿ ಮಾಡಲು ಬಯಸಿದ್ದು, ಕಾನೂನು ಸಲಹೆಗಾರರನ್ನು ಹೊರಗಿಡಲಾಗಿದೆ.
  • ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಇಲಾಖೆ ತಂದ ಪ್ರಸ್ತಾವಕ್ಕೆ ಒಪ್ಪಿಗೆ ನೀಡಿದೆ.
  • ಎಪಿಎಂಸಿ ಕಾನೂನನ್ನು ಪರಿಷ್ಕರಿಸಿ ಹಿಂದಿನ ಸರ್ಕಾರದವರು ಸತ್ವ ಕಳೆದಿದ್ದರು. ಆ ತಿದ್ದುಪಡಿಯನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ.
  • ಸಮಾಜ ಕಲ್ಯಾಣ ಇಲಾಖೆಯು ತಂದ ಪ್ರಸ್ತಾವನೆಯಂತೆ, ಪ್ರತಿ ಕಾಲೇಜು, ಶಾಲೆಯಲ್ಲಿ ಸಂವಿಧಾನ ಪೀಠಿಕೆಯನ್ನು
    ಓದಲು ತೀರ್ಮಾನ.
  • ಸಾರಿಗೆ ನಿಗಮಗಳಿಂದ ಮೋಟರ್ ಟ್ಯಾಕ್ಸ್ ಮತ್ತು ಅರಿಯರ್ಸ್ 79.85 ಕೋಟಿ ಬಾಕಿ ಇದೆ. ಅದನ್ನು ಎಕ್ಸಂಮ್ಟೆಡ್ ಮಾಡಲಾಗಿದೆ. ನಿಗಮಗಳ ಭಾರವನ್ನು ತಗ್ಗಿಸುವುದು ಉದ್ದೇಶ.
  • ಸಾರಿಗೆ ನಿಗಮಗಳು ಡಬಲ್ ಡೆಕರ್, ಎಲೆಕ್ಟ್ರಿಕ್ ವಾಹನ 28 ಕೋಟಿ ಕೊಡಲು ಅನುಮತಿ.
  • ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಶೇ. 15 ಹೆಚ್ಚಿಸಲು ಘಟನೋತ್ತರ ಅನುಮತಿ.
  • ಗೃಹ ಲಕ್ಷ್ಮೀ ಯೋಜನೆಯ ಯಶಸ್ವಿ ಅನುಷ್ಠಾನವನ್ನು ಸಮಸ್ಯೆ ರಹಿತವಾಗಿ ಮಾಡಲು ಟೆಕ್ನಾಲಜಿ ಬಳಸಲು
    ತೀರ್ಮಾನ.
  • ಡಾ.ಮೈತ್ರಿ ಕೆಎಎಸ್ ಜ್ಯೂ. ಹುದ್ದೆ ಪ್ರಸ್ತಾವನೆ ಬಗ್ಗೆ ಚರ್ಚೆಯಾಗಿದ್ದು, ತಡೆ ಹಿಡಿಯಲಾಗಿದೆ.
  • 1081 ಕೋಟಿ ರೂ. ವೆಚ್ಚದಲ್ಲಿ 243 ಎಂಎಲ್ ಡಿ ವೃಷಭಾವತಿ ನದಿಯ ನೀರನ್ನು 70 ಕೆರೆ ತುಂಬಿಸುವ ಪರಿಷ್ಕೃತ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂ.ಗ್ರಾಮಾಂತರದ ಕೆರೆ ಭರ್ತಿ ಯೋಜನೆ.
  • ವಿಪತ್ತು ನಿರ್ವಹಣೆ ಸಂಬಂಧ ನಿರ್ದೇಶನ ನೀಡಲು ಸಂಪುಟ ಉಪ ಸಮಿತಿ ರಚಿಸಲು ಒಪ್ಪಿಗೆ.
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ptcl
    scst atrocities
    ಜಾನುವಾರು ಹತ್ಯೆ ನಿಷೇಧ ಕಾಯ್ದೆ
    ವಿದ್ಯಾರ್ಥಿಗಳ SCS T ) ಉನ್ನತ ಶಿಕ್ಷಣದ ವಿದ್ಯಾರ್ಥಿ ವೇತನ ಮುಂತಾದ ವಿಷಯಗಳು ಚರ್ಚೆಗೆ ಬಂದಲ್ಲಾ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X