ಸಾರಿಗೆ ನಿಗಮಗಳಲ್ಲಿ ಖಾಲಿ ಇರುವ 16,969 ಹುದ್ದೆಗಳನ್ನು ಭರ್ತಿ ಮಾಡಿ: ಫೆಡರೇಷನ್‌ ಅಧ್ಯಕ್ಷ ಅನಂತಸುಬ್ಬರಾವ್

Date:

Advertisements
  • ಸಮಗ್ರ ಪ್ರದೇಶ ಯೋಜನೆಯನ್ನು ಸಂಪೂರ್ಣವಾಗಿ ಜಾರಿ ಮಾಡಿ
  • ನಿಗಮಗಳ ವಾಹನದ ಸಂಖ್ಯೆ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಳ ಮಾಡಿ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ತನ್ನ ಐದು ಗ್ಯಾರಂಟಿಗಳ ಪೈಕಿ ಮೊದಲಿಗೆ ಶಕ್ತಿ ಯೋಜನೆಯನ್ನು ಜಾರಿ ಮಾಡಿದ್ದು, ಮಹಿಳೆಯರು ಸಂಭ್ರಮದಿಂದ ಬಸ್‌ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಮಹಿಳೆಯರ ಪ್ರಯಾಣದ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ನಿಗಮಗಳ ವಾಹನದ ಸಂಖ್ಯೆಯನ್ನು ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಳ ಮಾಡಬೇಕು ಹಾಗೂ ನಿಗಮಗಳಲ್ಲಿ ಖಾಲಿ ಇರುವ 16,969 ಹುದ್ದೆಗಳನ್ನು ತುರ್ತು ಕ್ರಮ ಕೈಗೊಂಡು ಭರ್ತಿ ಮಾಡಬೇಕು ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್‌ ಅಂಡ್‌ ವರ್ಕರ್ಸ್‌ ಫೆಡರೇಷನ್‌ನ ಅಧ್ಯಕ್ಷ ಹೆಚ್‌ ವಿ ಅನಂತಸುಬ್ಬರಾವ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಚಾಲಕ ಹಾಗೂ ನಿರ್ವಾಹಕರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಎಸ್‌ಆರ್‌ಟಿಸಿ ಸ್ಟಾಫ್‌ ಅಂಡ್‌ ವರ್ಕರ್ಸ್‌ ಫೆಡರೇಷನ್‌ನ ಅಧ್ಯಕ್ಷ ಹೆಚ್‌ ವಿ ಅನಂತಸುಬ್ಬರಾವ್ ಅವರು ಪತ್ರ ಬರೆದಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್‌ ಹಿನ್ನೆಲೆ, ಹಲವಾರು ಮಹಿಳೆಯರು ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ, ಖಾಸಗಿ ಸಂಸ್ಥೆಗಳ ವಾಹನಗಳಲ್ಲಿ ಸಂಚರಿಸುತ್ತಿರುವ ಮಹಿಳೆಯರ ಸಂಖ್ಯೆ ಶೂನ್ಯವಾಗಿದೆ. ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿದಂತೆ ಮತ್ತಿತರ ಸಿಬ್ಬಂದಿ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ವಾಹನಗಳಿಗೆ ಬಂಡವಾಳ ಹೂಡಿರುವ ಮಾಲೀಕರು ಸಹ ಕಷ್ಟದಲ್ಲಿದ್ದಾರೆ ಎಂದಿದ್ದಾರೆ.

Advertisements

“ನಿಗಮದಲ್ಲಿ ವಾಹನಗಳ ಕೊರತೆ ಇರುವುದರಿಂದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂಸ್ಥೆಯ ಚಾಲಕರು ಹಾಗೂ ನಿರ್ವಾಹಕರು ಇಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ಶ್ರೀನಿವಾಸಮೂರ್ತಿ ಅವರ ಏಕ ಸದಸ್ಯ ಸಮಿತಿಯೂ ತನ್ನ ವರದಿ ಮತ್ತು ಶಿಫಾರಸ್ಸುಗಳಲ್ಲಿ ಕೆಎಸ್‌ಆರ್‌ಟಿಸಿಯ ಒಂದೇ ಒಂದು ಬಸ್‌ ಹೋಗದಿರುವಂತಹ 2500ಕ್ಕೂ ಹೆಚ್ಚು ಹಳ್ಳಿಗಳನ್ನು ಗುರುತಿಸಿದ್ದಾರೆ. ಈ ಹಳ್ಳಿಗಳಿಗೂ ನಮ್ಮ ನಿಗಮಗಳ ಬಸ್‌ ಹೋಗುವಂತೆ ವ್ಯವಸ್ಥೆ ರೂಪಿಸಬೇಕು” ಎಂದು ತಿಳಿಸಿದ್ದಾರೆ.

“ಹಿಂದಿನ ಅವಧಿಯಲ್ಲಿ ತಾವು ಮುಖ್ಯಮಂತ್ರಿ ಆಗಿದ್ದಾಗ ಜನತೆಗೆ ಹೆಚ್ಚಿನ ಹಾಗೂ ಸಮರ್ಪಕ ಸಾರಿಗೆ ಸೇವಕರನ್ನು ಸಾರಿಗೆ ನಿಗಮಗಳ ಮೂಲಕ ಒದಗಿಸಲು ಸಮಗ್ರ ಪ್ರದೇಶ ಯೋಜನೆ (Comprehensive Area Scheme) ತಂದಿದ್ದೀರಿ. ಇದರ ಪ್ರಕಾರ ಯಾವುದೇ ವಿಧವಾದ ಸಾರಿಗೆ ಸೇವೆಗಳನ್ನು ಒದಗಿಸುವ ಹಕ್ಕು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಮಾತ್ರ ಮೀಸಲಾಗಿರುತ್ತದೆ. ನಂತರ ಬಂದ ಸರ್ಕಾರ ಈ ಅಧಿಸೂಚನೆಗೆ ಹಲವು ಬದಲಾವಣೆ ತಂದು ಇದನ್ನು ವಿಕೃತಿಗೊಳಿಸಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇಂದಿರಾ ಕ್ಯಾಂಟೀನ್‌ನಲ್ಲಿ ಇನ್ನುಮುಂದೆ ಊಟದ ಜೊತೆಗೆ ಮೊಟ್ಟೆ ನೀಡಲು ಚಿಂತನೆ

“ಈ ಹಿಂದಿನ ಸರ್ಕಾರ ತಾವು ತಂದ ಅಧಿಸೂಚನೆಯ ಅಂಶಗಳನ್ನು ಗಾಳಿಗೆ ತೂರಿತು. ಸಾರಿಗೆ ನಿಗಮಗಳಿಗೆ ಲಾಭ ಬರುತ್ತಿದ್ದ 41 ಮಾರ್ಗಗಳನ್ನು ಖಾಸಗಿಯವರಿಗೆ ಒಪ್ಪಿಸುವ ವ್ಯವಸ್ಥೆ ಮಾಡಿತು. ನಗರ ಪ್ರದೇಶದಲ್ಲಿಯೂ 20 ಕಿ.ಮೀ ವರೆಗೆ ಖಾಸಗಿ ವಾಹನಗಳಿಗೆ ಅನುಮತಿ ನೀಡಿತು. ಈ ಹಿಂದೆ ತಾವು ಹೊರಡಿಸಿದ್ದ ಅಧಿಸೂಚನೆಯನ್ನು ಜಾರಿ ಮಾಡುವ ಕ್ರಮವನ್ನು ಸರ್ಕಾರ ಇದೀಗ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಕಾಪಾಡುವ ದೃಷ್ಟಿಯಿಂದ ಈ ಕ್ರಮ ಶೀಘ್ರವಾಗಿ ಆಗಬೇಕು” ಎಂದು ಮನವಿ ಮಾಡಿದ್ದಾರೆ.

“ಶಕ್ತಿ ಯೋಜನೆ ಯಶಸ್ವಿಯಾಗಲೂ ಮತ್ತು ಖಾಸಗಿ ಬಸ್‌ ಮಾಲೀಕರಲ್ಲಿ ಕೆಲಸ ಮಾಡುತ್ತಿರುವ ನೌಕರರ ಸಂಕಷ್ಟಗಳನ್ನು ಬಗೆಹರಿಸುವ ದೃಷ್ಟಿಯಿಂದ ಖಾಸಗಿ ಬಸ್‌ಗಳನ್ನು ನಮ್ಮ ನಿಗಮಗಳಿಗೆ ತೆಗೆದುಕೊಂಡು ಸಮಗ್ರ ಪ್ರದೇಶ ಯೋಜನೆಯನ್ನು ಸಂಪೂರ್ಣವಾಗಿ ಜಾರಿ ಮಾಡಬೇಕು” ಎಂದು ಕೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X