ತುಮಕೂರು | ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ : ಜಿಲ್ಲಾಧಿಕಾರಿ ಪರಿಶೀಲನೆ

Date:

Advertisements

ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು. 

ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ 25768 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಯಾವುದೇ ರೀತಿಯ ಅಡಚಣೆಗಳಿಲ್ಲದೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಲಲಿತವಾಗಿ ನಡೆಯಿತು.  

ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 13, ಕೊರಟಗೆರೆ ತಾಲ್ಲೂಕಿನಲ್ಲಿ 1, ಗುಬ್ಬಿ, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ ತಾಲ್ಲೂಕಿನಲ್ಲಿ ತಲಾ 2, ಕುಣಿಗಲ್, ತಿಪಟೂರು, ಪಾವಗಡ ತಾಲ್ಲೂಕಿನಲ್ಲಿ ತಲಾ 3, ಸಿರಾ ತಾಲ್ಲೂಕಿನಲ್ಲಿ 4 ಸೇರಿ ಒಟ್ಟು 35 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ನಕಲು, ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

Advertisements
1001116057

ನಗರದಲ್ಲಿರುವ ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಜೂನಿಯರ್ ಕಾಲೇಜು, ಎಂಪ್ರೆಸ್ ಕಾಲೇಜು, ಸಿದ್ದಗಂಗಾ ಮಹಿಳಾ ಪದವಿ ಪೂರ್ವ ಕಾಲೇಜು, ಕಾಳಿದಾಸ ಪ.ಪೂ. ಕಾಲೇಜು ಸೇರಿದಂತೆ ಜಿಲ್ಲೆಯಾದ್ಯಂತ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಪೋಷಕರೊಂದಿಗೆ ಬೆಳಿಗ್ಗೆ 8 ಗಂಟೆಗೆ ಆಗಮಿಸಿ ತಮ್ಮ ನೋಂದಣಿ ಸಂಖ್ಯೆ ಇರುವ ಕೊಠಡಿಗಳ ನಂಬರ್‌ಗಾಗಿ ಮುಗಿ ಬಿದ್ದಿದ್ದ ದೃಶ್ಯಗಳು ಕಂಡು ಬಂದವು. 

ಡಿಸಿ ಎಸ್ಪಿ ಪರಿಶೀಲನೆ

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಾದ ಸರ್ಕಾರಿ ಜೂನಿಯರ್ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

1001116056

ಪರೀಕ್ಷಾ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕೊಠಡಿಯಲ್ಲಿ ಬೆಳಕಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು.

1001115837

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 24,378 ಹೊಸ ವಿದ್ಯಾರ್ಥಿಗಳು, 318 ಪುನರಾವರ್ತಿತ, 1067 ಖಾಸಗಿ ಹಾಗೂ 5 ಫಲಿತಾಂಶ ಸುಧಾರಣೆ ವಿದ್ಯಾರ್ಥಿಗಳು ಸೇರಿ ಒಟ್ಟು 25,768 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 9088 ವಿಜ್ಞಾನ, 10217 ವಾಣಿಜ್ಯ ಹಾಗೂ 5977 ಕಲಾ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ತಿಳಿಸಿದ್ದಾರೆ.

ಪರೀಕ್ಷಾ ವೇಳಾಪಟ್ಟಿ  

ಮಾರ್ಚ್ 1 ರಂದು ಕನ್ನಡ ಮತ್ತು ಅರೇಬಿಕ್ ಪರೀಕ್ಷೆ ನಡೆದಿದ್ದು, ಮಾ. 3 ರಂದು ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.4 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್; ಮಾ. 5ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ: ಮಾ. 7ರಂದು ಇತಿಹಾಸ, ಭೌತಶಾಸ್ತ್ರ, ಮಾ. 10 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹವಿಜ್ಞಾನ, ಮಾ. 12 ರಂದು ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ, ಮಾ. 13 ರಂದು ಅರ್ಥಶಾಸ್ತ್ರ, ಮಾ. 15 ರಂದು ಇಂಗ್ಲೀಷ್, ಮಾ. 17 ರಂದು ಭೂಗೋಳ ಶಾಸ್ತç, ಮಾ. 18 ರಂದು ಜೀವಶಾಸ್ತç, ಸಮಾಜಶಾಸ್ತç, ವಿದ್ಯುನ್ಮಾನಶಾಸ್ತç ಹಾಗೂ ಗಣಕ ವಿಜ್ಞಾನ, ಮಾ. 19 ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್, ಮಾ.20 ರಂದು ಹಿಂದಿ ಪರೀಕ್ಷೆ ನಡೆಯಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X