ಆಶಾ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ, ವೇತನ ಸಹಿತ ಹೆರಿಗೆ ರಜೆಯನ್ನು ಆಂಧ್ರಪ್ರದೇಶ ಸರ್ಕಾರವು ಜಾರಿಗೊಳಿಸಿದೆ. ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಿಗೆ (ಆಶಾ ಕಾರ್ಯಕರ್ತೆಯರು) ಈ ಸೌಲಭ್ಯ ಒದಗಿಸುವ ಪ್ರಸ್ತಾವನೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಹಿ ಹಾಕಿದ್ದಾರೆ.
ಜನರು ಮತ್ತು ಆರೋಗ್ಯ ವ್ಯವಸ್ಥೆಯ ನಡುವೆ ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತರಿಗೆ ಗ್ರಾಚ್ಯುಟಿ ದೊರೆಯುವಂತೆ ನೋಡಿಕೊಳ್ಳಲು ಆಂಧ್ರ ಸಿಎಂ ನಾಯ್ಡು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಶಾ ಕಾರ್ಯಕರ್ತೆಯರಿಗೆ ರೂ. 10 ಸಾವಿರ ಸಂಭಾವನೆ; ಭರವಸೆ ಹುಸಿಯಾಗದಿರಲಿ
“ಸುಮಾರು 30 ವರ್ಷಗಳ ಕಾಲ ಸೇವೆಯನ್ನು ಪೂರೈಸುವ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರು 1.50 ಲಕ್ಷ ರೂಪಾಯಿಗಳ ಗಣನೀಯ ನಿವೃತ್ತಿ ಪ್ರಯೋಜನವನ್ನು ಪಡೆಯಬಹುದು” ಎಂದು ಶನಿವಾರ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹಾಗೆಯೇ ಇದರಿಂದಾಗಿ ಸುಮಾರು 42,752 ಕಾರ್ಮಿಕರು ಪ್ರಯೋಜನ ಪಡೆಯುತ್ತಾರೆ ಎಂದು ಹೇಳಲಾಗಿದೆ.
ಅರ್ಹ ಆರೋಗ್ಯ ಕಾರ್ಯಕರ್ತರ ಮೊದಲ ಎರಡು ಹೆರಿಗೆಗಳಿಗೆ 180 ದಿನಗಳ ವೇತನ ಸಹಿತ ಹೆರಿಗೆ ರಜೆಯನ್ನು ವಿಸ್ತರಿಸಲು ಅನುಮೋದಿಸಲಾಗಿದೆ. ಇದಲ್ಲದೆ, ಆಶಾ ಕಾರ್ಯಕರ್ತೆಯರ ನಿವೃತ್ತಿ ವಯಸ್ಸನ್ನು 60ರಿಂದ 62ಕ್ಕೆ ಹೆಚ್ಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
