ವಿಜಯಪುರ | ಔಪಚಾರಿಕ ಶಿಕ್ಷಣದೊಂದಿಗೆ ವೃತ್ತಿ ಶಿಕ್ಷಣ ವಿಲೀನಗೊಳಿಸಬೇಕು: ರಾಘವೇಂದ್ರ ಪುರೋಹಿತ್

Date:

Advertisements

ಔಪಚಾರಿಕ ಶಿಕ್ಷಣದೊಂದಿಗೆ ವೃತ್ತಿ ಶಿಕ್ಷಣವನ್ನು ವಿಲೀನಗೊಳಿಸಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿ ಜೀವನದ ಯೋಜನೆಗಳನ್ನು ತಯಾರು ಮಾಡಲು ಅನುಕೂಲ ಮಾಡುವುದು ಅಗತ್ಯವಿದೆ ಎಂದು ಉಪ ಪ್ರಾಚಾರ್ಯ ರಾಘವೇಂದ್ರ ಎಚ್ ಪುರೋಹಿತ್ ಅಭಿಪ್ರಾಯಪಟ್ಟರು.

ಜಿಲ್ಲೆಯ ಬಬಲೇಶ್ವರ ತಾಲೂಕಿನ ಕರ್ನಾಟಕ ಪಬ್ಲಿಕ್‌ ಶಾಲೆ ಮಮದಾಪುರದಲ್ಲಿ “ರಂಗೋತ್ಸವ ಮತ್ತು ನನ್ನ ವೃತ್ತಿ ನನ್ನ ಆಯ್ಕೆ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ವಿದ್ಯಾರ್ಥಿಗಳಿಗೆ ವೃತ್ತಿ ಯೋಜನೆಯ ಆಶಾದಾಯಕ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಕರ್ನಾಟಕ ಪಬ್ಲಿಕ್ ಶಾಲೆ ಮಮದಾಪುರ ದಲ್ಲಿ ವೃತ್ತಿ ಯೋಜನ ಕೋಶವನ್ನು ಪ್ರಾರಂಭಿಸಿದೆ. ವಿದ್ಯಾರ್ಥಿಗಳು ಸಾಧ್ಯವಾದಷ್ಟು ಇದರ ಪ್ರಯೋಜನ ಪಡೆದುಕೊಳ್ಳಬೇಕು” ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳಿಂದ ತಯಾರಿಸಲ್ಪಟ್ಟ ಚಿತ್ರಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿದ ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯೆ ರಾಜೇಶ್ವರಿ ಮೋಪಗಾರ, ತಮ್ಮ ನಿಜ ಜೀವನದ ಉದಾಹರಣೆಯೊಂದಿಗೆ ಮಗುವಿನ ಜೀವನದಲ್ಲಿ ವೃತ್ತಿ ಆಯ್ಕೆ ಸ್ವತಂತ್ರವಾಗಿ ಹಾಗೂ ಆಶಾದಾಯಕವಾಗಿ ಇರಬೇಕೆಂದರು.

Advertisements

ಇದನ್ನೂ ಓದಿ: ವಿಜಯಪುರ | ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಕೆಗೆ ಸೂಚನೆ

ಚಿತ್ರಕಲಾ ಶಿಕ್ಷಕಿ ಎಸ್ ಎಸ್ ಮೊಗಲಿ, ಹಿರಿಯ ಚಿತ್ರಕಲಾ ಶಿಕ್ಷಕ ರಶೀದ್ ಖಾನ್, ಶಿಕ್ಷಕ ಮಹದೇವಪ್ಪ ಮೊಪಗಾರ, ಭಾಗ್ಯಶ್ರೀ ಎಸ್ ಗಚ್ಚಿನಮಠ, ಮಹಾಂತೇಶ್ ಜಿ ಕುರಿ, ಅಶೋಕ್ ಎಸ್ ಇಂಡಿ ಹಾಗೂ ಸಮಸ್ತ ಕೆಪಿಎಸ್ ಪರಿವಾರದ ಶಿಕ್ಷಕರು ಹಾಗೂ 800ಕ್ಕೂ ಹೆಚ್ಚು ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X