ಮುಂಬೈಗೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ಕಾರ್ಕಳ ತಾಲೂಕಿನ ನೀರೆ ಗ್ರಾಮದ ಪಡುಮಠಬೆಟ್ಟು ನಿವಾಸಿ ಕೀರ್ತನ್ (38) ಎಂಬುವವರು ನಾಪತ್ತೆ ಆದ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ 2024 ರ ಮಾರ್ಚ್ 29 ರಂದು ಮನೆ ತೊರೆದ ಕೀರ್ತನ್ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ.
5 ಅಡಿ 7 ಇಂಚು ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು ಕನ್ನಡ, ಹಿಂದಿ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 08258-230213, 233100 ಹಾಗೂ ಮೊ.ನಂ: 9480805461 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಛೇರಿ ಪ್ರಕಟಣೆ ತಿಳಿಸಿದ್ದಾರೆ.
