ತುಮಕೂರು | ಹಕ್ಕಿ ಜ್ವರ : ಜಿಲ್ಲೆಯಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ : ಶುಭ ಕಲ್ಯಾಣ್

Date:

Advertisements

 ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಹಕ್ಕಿಜ್ವರ ದೃಢಪಟ್ಟಿರುವ ಬಗ್ಗೆ ವರದಿಯಾಗಿದ್ದು, ತುಮಕೂರು ಜಿಲ್ಲೆಯಲ್ಲಿ ಈವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. 

ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಕ್ಕಿ ಜ್ವರದ ರೋಗೋದ್ರೇಕವಿರುವುದರಿಂದ ಶಿರಾ ತಾಲ್ಲೂಕು ಕಗ್ಗಲಡು ಗ್ರಾಮ ಸೇರಿದಂತೆ ಜಿಲ್ಲೆಯಲ್ಲಿ ವಲಸೆ ಪಕ್ಷಿಗಳು ಬರುವ ಸ್ಥಳದಲ್ಲಿ ನಿಗಾವಹಿಸಲಾಗಿದೆ. ಕೋಳಿಗಳು ಸತ್ತರೆ ಪಶುಪಾಲನಾ ಇಲಾಖೆ ಗಮನಕ್ಕೆ ತರಬೇಕೆಂದು ಜಿಲ್ಲೆಯ ಎಲ್ಲಾ ಕೋಳಿ ಫಾರಂ ಮಾಲೀಕರಿಗೆ ಸೂಚಿಸಲಾಗಿದೆ. ಹಳ್ಳಿಗಳಲ್ಲಿ ಕೋಳಿಗಳು ಸತ್ತರೆ ತಕ್ಷಣವೇ ಪ್ರಯೋಗಾಲಯಕ್ಕೆ ಕಳುಹಿಸಲು ಪಶುಪಾಲನಾ ಇಲಾಖೆಗೆ ಸೂಚಿಸಲಾಗಿದೆ. 

ಜಿಲ್ಲೆಯಲ್ಲಿ ಹಕ್ಕಿಜ್ವರ ನಿಯಂತ್ರಣ ಮಾಡಲು ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ಅಧಿಕಾರಿ ಡಾ.ನಾಗಮಣಿ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ ಹಾಗೂ ಒಬ್ಬ ಪಶುವೈದ್ಯ, ಇಬ್ಬರು ತಾಂತ್ರಿಕ ಸಿಬ್ಬಂದಿ ಹಾಗೂ ಇಬ್ಬರು ಡಿ ದರ್ಜೆ ನೌಕರರನ್ನೊಳಗೊಂಡ 64 ತಂಡಗಳನ್ನು ರಚಿಸಲಾಗಿದೆ. 

Advertisements

ಜಿಲ್ಲೆಯಲ್ಲಿ ಹಕ್ಕಿಜ್ವರದ ರೋಗೋದ್ರೇಕ ಕಂಡು ಬಂದರೆ ಅವಶ್ಯಕತೆಯಿರುವ  ರಾಸಾಯನಿಕಗಳು ಲಭ್ಯವಿದ್ದು, ರೋಗವನ್ನು ನಿಯಂತ್ರಿಸಲು ಈಗಾಗಲೇ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರು ಕೋಳಿ ಶೀತಜ್ವರದ ಬಗ್ಗೆ ಆತಂಕ ಪಡಬೇಕಿಲ್ಲ. ಚೆನ್ನಾಗಿ ಬೇಯಿಸಿದ ಕೋಳಿ ಮಾಂಸವನ್ನು ಸೇವಿಸಬಹುದು ಎಂದು ಅವರು ತಿಳಿಸಿದ್ದಾರೆ. 

ಕೋಳಿಗಳು ಅಸ್ವಾಭಾವಿಕವಾಗಿ ಮರಣ ಹೊಂದಿದರೆ 24/7 ಕಾರ್ಯನಿರ್ವಹಿಸುವ ಕಾಲ್ ಸೆಂಟರ್ ಸಂಖ್ಯೆ 7304975519 ಅಥವಾ 0816-2213400ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಹಕ್ಕಿ ಜ್ವರವು ವೈರಸ್ಸಿನಿಂದ ಕೋಳಿ, ಬಾತು ಕೋಳಿ, ಪಕ್ಷಿಗಳಲ್ಲಿ ಬರುವಂತಹ ಮಾರಣಾಂತಿಕ ಖಾಯಿಲೆಯಾಗಿದೆ. ರೋಗಗ್ರಸ್ಥ ಕೋಳಿಗಳು ಆರೋಗ್ಯವಂತ ಕೋಳಿಗಳಿಗೆ ಗಂಟಲು ದ್ರವದ ಮೂಲಕ ಮತ್ತು ಹಿಕ್ಕೆಯಿಂದ ವೈರಸ್ಸನ್ನು ಹರಡುತ್ತದೆ. ಇಲ್ಲಿಯವರೆಗೂ ಭಾರತದಲ್ಲಿ ಈ ಖಾಯಿಲೆ ಮನುಷ್ಯರಲ್ಲಿ ಕಂಡು ಬಂದಿರುವ ಉದಾಹರಣೆಗಳಿಲ್ಲ. ಜಿಲ್ಲೆಯಲ್ಲಿ 20ನೇ ಜಾನುವಾರುಗಣತಿ ಪ್ರಕಾರ 40,28,178 ಕೋಳಿ, 687 ಕೋಳಿ ಫಾರಂಗಳಿವೆ ಎಂದು ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ(ಆಡಳಿತ) ಡಾ.ಜಿ.ಗಿರೀಶ್ ಬಾಬುರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X