ಮೈಸೂರು | ‘ ಬಿ-ಖಾತಾ ‘ ಅಭಿಯಾನಕ್ಕೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಚಾಲನೆ

Date:

Advertisements

ಮೈಸೂರು ಮಹಾ ನಗರ ಪಾಲಿಕೆ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪ ಜಿಲ್ಲೆಯ ನಗರ ಪಾಲಿಕೆ ಹಾಗೂ ನಗರ ಸಭೆ, ಪುರಸಭೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದೆ ವಾಸಿಸುತಿದ್ದ ಅರ್ಹ ಫಲಾನುಭವಿಗಳಿಗೆ ‘ ಬಿ-ಖಾತಾ ‘ ಅಭಿಯಾನದಲ್ಲಿ ಸಾಂಕೇತಿಕವಾಗಿ ಪತ್ರವನ್ನು ವಿತರಿಸುವ ಮೂಲಕ ಚಾಲನೆ ನೀಡಿದರು.

” ರಾಜ್ಯ ಸರ್ಕಾರವು ಈ ಐತಿಹಾಸಿಕ ತೀರ್ಮಾನವನ್ನು ಕೈಗೊಂಡಿದ್ದು, ಅನೇಕ ವರ್ಷಗಳ ಕಾಲ ಯಾವುದೇ ದಾಖಲೆಗಳಿಲ್ಲದೆ ನಿವೇಶನಗಳಲ್ಲಿ ವಾಸಿಸುತಿದ್ದ ಜನರ ಅನುಕೂಲಕ್ಕಾಗಿ ಬಿ-ಖಾತಾ ಅಭಿಯಾನ ಪ್ರಾರಂಭಿಸಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಂಡು ಯಾವುದೇ ಲೋಪವಾಗದಂತೆ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು, ಇದರಿಂದ ಸ್ಥಳೀಯ ಸಂಸ್ಥೆಗಳಿಗೂ ಆದಾಯ ದೊರಕಲಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುಂಜಾಗ್ರತೆ ವಹಿಸಿ : ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೂಚನೆ

Advertisements

ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್, ಕೆ ಹರೀಶ್ ಗೌಡ, ಶ್ರೀವತ್ಸ, ವಿಧಾನ ಪರಿಷತ್ ಸದಸ್ಯ ಡಾ ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ವಸ್ತು ಪ್ರದರ್ಶನ ಪ್ರಾಧೀಕಾರದ ಅಧ್ಯಕ್ಷ ಆಯೂಬ್ ಖಾನ್, ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ಇನ್ನಿತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X