ಉಡುಪಿ | ರಂಗ ಸಂಸ್ಥೆಗಳು ಕಲೆಯ ಜೊತೆಗೆ ಜೀವನ ಪಾಠ ಹೇಳಿಕೊಡುತ್ತವೆ – ಜಯಕರ ಶೆಟ್ಟಿ ಇಂದ್ರಾಳಿ

Date:

Advertisements

ಯುವಜನರು ದಾರಿ ತಪ್ಪುವುದನ್ನು, ದುಶ್ಚಟಕ್ಕೆ ಬಲಿಯಾಗುವುದನ್ನು ತಡೆಯುವ ಕೆಲಸ ರಂಗಚಟುವಟಿಕೆ, ಸಮಾಜಮುಖಿ ಕಾರ್ಯಗಳಿಂದ ಆಗುತ್ತವೆ ಎಂದು ತುಳುಕೂಟ ಉಡುಪಿ ಇದರ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಅಜ್ಜರಕಾಡು ಭುಜಂಗಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ 13ನೇ ವರ್ಷದ ರಂಗಹಬ್ಬದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಶನಿವಾರ ಮಾತನಾಡಿದರು.

ಸಣ್ಣಪ್ರಾಯದಲ್ಲಿಯೇ ಹಾಡು, ನೃತ್ಯ, ನಾಟಕಗಳಲ್ಲಿ ತೊಡಗಿಸಿಕೊಳ್ಳುವವರು ದಾರಿ ತಪ್ಪುವುದಿಲ್ಲ. ದುರಭ್ಯಾಸಗಳಿಗೆ ಒಳಗಾಗುವುದಿಲ್ಲ. ರಂಗ ಸಂಸ್ಥೆಗಳು ಕಲೆಯನ್ನು ಕಲಿಸುವುದರ ಜೊತೆಗೆ ಜೀವನ ಪಾಠವನ್ನೂ ಹೇಳಿಕೊಡುತ್ತವೆ ಎಂದು ತಿಳಿಸಿದರು.

Advertisements

ಸಮಾನ ಮನಸ್ಕರು ಸೇರಿ ಸಮಾಜಮುಖಿ ಕೆಲಸಗಳಿಗಾಗಿ ಸಂಘಟನೆ ಕಟ್ಟಿದರು. ಅದರ ಜೊತೆಗೆ ಪ್ರತಿಭೆಗಳನ್ನು ಬೆಳಗುವ ಕಾರ್ಯವನ್ನು ಮಾಡತೊಡಗಿದರು. ಎಲ್ಲರಲ್ಲಿ ಹುದುಗಿರುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುತ್ತಿದೆ ಎಂದರು.

ಯಾವುದೇ ಕಲಾವಿದರು ಸನ್ಮಾನಕ್ಕಾಗಿ ಕಲಾಸೇವೆ ಮಾಡಿದವರಲ್ಲ. ಆದರೆ, ಅವರು ಸಾಧನೆಯನ್ನು ಗುರುತಿಸುವುದು ಸಮಾಜದ ಕರ್ತವ್ಯ. ಅಂಥ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಸುಮನಸಾ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದು ಶ್ಲಾಘಿಸಿದರು.

ಲಯನ್ಸ್‌ ಉಪ ಗವರ್ನರ್‌ ಸಪ್ನಾ ಸುರೇಶ್‌ ಮಾತನಾಡಿ, ಸಂಘ ಸಂಸ್ಥೆಗಳನ್ನು ಹುಟ್ಟು ಹಾಕಿದ್ದಕ್ಕಿಂತ ದೊಡ್ಡ ಜವಾಬ್ದಾರಿ ಬೆಳೆಸುವುದು. ಅದಕ್ಕೆ ನಿರಂತರ ಪರಿಶ್ರಮ ಅಗತ್ಯ. ಸುಮನಸಾ 23 ವರ್ಷಗಳಿಂದ ಸತತ ಪರಿಶ್ರಮಗಳನ್ನು ಹಾಕುತ್ತಾ ಬೆಳೆಯುತ್ತಾ ಬಂದಿದೆ ಎಂದು ಹೇಳಿದರು.

ಯಕ್ಷಗುರು ಯು. ದುಗ್ಗಪ್ಪ ಸ್ಮರಣಾರ್ಥ ಯಕ್ಷಸುಮ ಪ್ರಶಸ್ತಿಯನ್ನು ಗೋಪು ಕೆ. ಅವರಿಗೆ ಪ್ರದಾನ ಮಾಡಲಾಯಿತು.

ಮಲ್ಪೆ ಕಾರ್ತಿಕ್‌ ಗ್ರೂಪ್‌ ಪ್ರವರ್ತಕ ಹರಿಯಪ್ಪ ಕೋಟ್ಯಾನ್‌, ಮಲ್ಪೆ ಉದ್ಯಮಿ ಆನಂದ್‌ ಪಿ. ಸುವರ್ಣ, ಉದ್ಯಮಿ ಹರೀಶ್‌ ಶ್ರೀಯಾನ್‌,  ಉದ್ಯಮಿಗಳಾದ ಪ್ರವೀಣ್‌ ಕುಮಾರ್‌ ಶೆಟ್ಟಿ ಕಪ್ಪೆಟ್ಟು, ದೇವದಾಸ್‌ ಆರ್‌. ಸುವರ್ಣ, ಪ್ರಭಾಕರ ಪೂಜಾರಿ, ಸುಮನಸಾ ಕೊಡವೂರು ಸಂಸ್ಥೆಯ ಸಂಚಾಲಕ ಭಾಸ್ಕರ ಪಾಲನ್‌ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಪ್ರಕಾಶ್‌ ಜಿ. ಕೊಡವೂರು ಸ್ವಾಗತಿಸಿದರು. ಅಕ್ಷತ್‌ ಅಮೀನ್‌ ವಂದಿಸಿದರು. ಯೋಗೀಶ್‌ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಉಡುಪಿಯ ಪುನಹ ಥಿಯೇಟರ್‌ ಕಲಾವಿದರಿಂದ ‘ಯೋಗಿ ಮತ್ತು ಭೋಗಿ’ ನಾಟಕ ಪ್ರದರ್ಶನಗೊಂಡಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X