ಕಾಲೇಜಿನ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿದ್ದ ನಾಟಕದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರರಿಗೆ ಅಪಮಾನ ಮಾಡಿದ್ದಾರೆಂದು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನಲ್ಲಿರುವ ಜೈನ್ ಯೂನಿರ್ವಸಿಟಿಯ ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಕಳೆದ ವರ್ಷ ‘ಯೂತ್ ಫೆಸ್ಟ್’ ಆಯೋಜಿಸಲಾಗಿತ್ತು. ಈ ವೇಳೆ, ವಿದ್ಯಾರ್ಥಿಗಳು ಅಂಬೇಡ್ಕರ್ ಕುರಿತು ವಿಡಂಬನಾತ್ಮಕ ನಾಟಕ ಪ್ರದರ್ಶನ ಮಾಡಿದ್ದರು. ನಾಟಕದಲ್ಲಿ ‘ಬಿ.ಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್. ಡೋಂಟ್ ಟಚ್ ಮಿ, ಟಚ್ ಮಿ’ ಎಂಬ ಹಾಡನ್ನು ಬಳಸಲಾಗಿತ್ತು. ಅಲ್ಲದೆ, ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು?’ ಎಂಬ ಸಂಭಾಷಣೆಯೂ ಇತ್ತು.
ಅಂಬೇಡ್ಕರರ ಬಗ್ಗೆ ಬಳಸಲಾಗಿದ್ದ ಇಂತಹ ಪದಗಳು, ಹೇಳಿಕೆಗಳು ವಿರುದ್ಧ ಅಂಬೇಡ್ಕರ್ ವಾದಿ ಮತ್ತು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ವಿವಾದ ಭುಗಿಲೆದ್ದ ಬಳಿಕ, ಕಾಲೇಜು ಆಡಳಿತವು ಕ್ಷಮೆಯಾಚಿತ್ತು.
ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠ, “ವಿಡಂಬನಾತ್ಮಕ ನಾಟಕ ಪ್ರದರ್ಶಿಸಲು ಸಂವಿಧಾನದ ಆರ್ಟಿಕಲ್ 19ಅಡಿಯಲ್ಲಿ ಅವಕಾಶವಿದೆ. ನಾಟಕದಲ್ಲಿ ದಲಿತ ದೌರ್ಜನ್ಯ ಎಸಗುವ ಉದ್ದೇಶ ಇರಲಿಲ್ಲ ಎಂಬುದು ಕಂಡುಬಂದಿದೆ” ಎಂದು ಹೇಳಿದ್ದು, ಪ್ರಕರಣವನ್ನು ರದ್ದುಗೊಳಿಸಿದೆ.
If drama is portrayed on Modi inplace of Ambedkar, can high court dismisses the case ?