ಕ್ರಿಕೆಟ್‌ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿ; 501 ರನ್‌ ಬೆನ್ನಟ್ಟಿ ಗೆಲುವು

Date:

Advertisements

ಕೌಂಟಿ ಚಾಂಪಿಯನ್‌ಶಿಪ್ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು 501 ರನ್‌ ಗುರಿಯನ್ನು ಬೆನ್ನಟ್ಟಿ ಹೊಸ ದಾಖಲೆ ಸೃಷ್ಟಿಸಿದೆ. ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೂರ್ನಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.

ಜೂನ್ 14 ರಂದು ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್‌ನಲ್ಲಿ ನಡೆದ ಕೌಂಟಿ ಚಾಂಪಿಯನ್‌ಶಿಪ್ ಡಿವಿಷನ್ ಒನ್ – 2023 ಟೂರ್ನಿಯಲ್ಲಿ ಕೆಂಟ್ ಮತ್ತು ಸರ್ರೆ ನಡುವಿನ ಪಂದ್ಯದಲ್ಲಿ ಅಚ್ಚಳಿಯದ ದಾಖಲೆಯೊಂದು ನಿರ್ಮಾಣವಾಗಿದೆ. ಕೆಂಟ್ ತಂಡವು ನೀಡಿದ್ದ 501 ರನ್‌ ಬೃಹತ್ ಗುರಿಯನ್ನು ಬೆನ್ನಟ್ಟಿದ ಸರ್ರೆ ತಂಡವು ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿತು.

ಕೆಂಟ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿದ ಸರ್ರೆ ತಂಡ ಕೌಂಟಿ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ 500ಕ್ಕೂ ಹೆಚ್ಚು ರನ್‌ಗಳ ಗುರಿ ಬೆನ್ನಟ್ಟಿದ 2ನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

Advertisements

ಕೆಂಟ್ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 301 ರನ್ ಗಳಿಸಿತು. ನಂತರ ಮೊದಲ ಇನ್ನಿಂಗ್ಸ್‌ ಆಟವಾಡಿದ ಸರ್ರೆ 43.2 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್ ಆಗಿತ್ತು. ಮೊದಲ ಇನಿಂಗ್ಸ್‌ನಲ್ಲಿ 156 ರನ್‌ಗಳ ಮುನ್ನಡೆಯೊಂದಿಗೆ ಕೆಂಟ್ ತಂಡ 2ನೇ ಇನಿಂಗ್ಸ್‌ನಲ್ಲಿ 81 ಓವರ್‌ಗಳಲ್ಲಿ 344 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಸರ್ರೆ ತಂಡಕ್ಕೆ 501 ರನ್‌ಗಳ ಬೃಹತ್ ಗುರಿ ಪಡೆಯಿತು.

ನಾಲ್ಕನೇ ಇನ್ನಿಂಗ್ಸ್‌ನಲ್ಲಿ 501 ರನ್​ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಸರ್ರೆ ಬ್ಯಾಟ್ಸ್‌ಮನ್‌ಗಳು ಗೆಲುವಿನ ಮುನ್ನುಡಿ ಬರೆದರು. ಸರ್ರೆ ತಂಡದ ಪರ ಡೊಮ್ ಸಿಬ್ಲಿ ಔಟಾಗದೆ 140, ಜೇಮಿ ಸ್ಮಿತ್ 114 ಮತ್ತು ಫಾಕ್ಸ್ 124 ರನ್ ಸಿಡಿಸಿದರು. ಒಟ್ಟಾರೆ ಸರ್ರೆ ತಂಡದ 3 ಬ್ಯಾಟ್ಸ್‌ಮನ್‌ಗಳು ಶತಕ ಬಾರಿಸುವ ಮೂಲಕ ತಂಡವನ್ನು ಸುಲಭವಾಗಿ ಜಯದ ದಡ ತಲುಪಿಸಿದರು.

ಈ ಸುದ್ದಿ ಓದಿದ್ದೀರಾ? ಏಷ್ಯಾ ಕಪ್‌ | ʻಹೈಬ್ರಿಡ್ ಮಾದರಿʼಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಒಪ್ಪಿಗೆ

541 ಗುರಿ ಮುಟ್ಟಿದ್ದ ಭಾರತದ ಪಶ್ಚಿಮ ವಲಯ ತಂಡ

ಫೆಬ್ರವರಿ 2010 ರಲ್ಲಿ ಭಾರತದಲ್ಲಿ ನಡೆದ ದಕ್ಷಿಣ ವಲಯದ ವಿರುದ್ಧದ ಪಂದ್ಯದಲ್ಲಿ ಪಶ್ಚಿಮ ವಲಯ ತಂಡವು 541 ರನ್ ಗುರಿ ಮುಟ್ಟಿತ್ತು. ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲಿ ಇದು ಅತ್ಯಧಿಕ ರನ್‌ ಬೆನ್ನಟ್ಟಿದ್ದ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಯೂಸುಫ್ ಪಠಾಣ್ 190 ಎಸೆತಗಳಲ್ಲಿ 19 ಬೌಂಡರಿ ಹಾಗೂ 10 ಸಿಕ್ಸರ್​ಗಳೊಂದಿಗೆ 210 ರನ್ ಸಿಡಿಸಿ ಗೆಲುವಿನ ರೂವಾರಿಯಾಗಿದ್ದರು.

1925ರಲ್ಲಿ ಇಂಗ್ಲೆಡಿನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಾಟಿಂಗ್​ಹ್ಯಾಮ್​ ವಿರುದ್ಧದ ಪಂದ್ಯದಲ್ಲಿ ಮಿಡ್ಲ್‌ಸೆಕ್ಸ್ ತಂಡವು 502 ರನ್‌ಗಳ ಗುರಿ ಬೆನ್ನತ್ತಿತ್ತು. ಈಗ ಸರ್ರೆ ಕೂಡ ಆ ಪಟ್ಟಿಗೆ ಸೇರಿದೆ. 

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X