ಕಲಬುರಗಿ | ಅಕ್ರಮ ಮರಳುಗಾರಿಗೆ ತಡೆಯಲು ಹೋಗಿದ್ದ ಪೇದೆ ಹತ್ಯೆ

Date:

Advertisements

ಭೀಮಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಹೋಗಿದ್ದ ಪೊಲೀಸ್‌ ಪೇದೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ.

ಲೋಗಿ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೈಸೂರ್ ಚೌಹಾಣ್ ಹತ್ಯೆಗೀಡಾದ ಹೆಡ್ ಕಾನ್ಸ್‌ಟೇಬಲ್ ಎಂದು ಗುರುತಿಸಲಾಗಿದೆ. ತಾಲೂಕಿನ ನಾರಾಯಣಪುರ ಬಳಿ ಗುರುವಾರ ರಾತ್ರಿ ಟ್ರ್ಯಾಕ್ಟರ್‌ ಹರಿಸಿ ಚೌಹಾಣ್ ಅವರನ್ನು ಹತ್ಯೆಗೈಯಲಾಗಿದೆ.

ರಾತ್ರಿ 10 ಗಂಟೆ ಸುಮಾರಿಗೆ ಚೌಹಾಣ್‌ ಅವರು ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪರಿಶೀಲನೆ ನಡೆಸಲು ತೆರಳಿದ್ದರು. ಈ ವೇಳೆ, ಬೈಕ್‌ನಲ್ಲಿ ಹೋಗುತ್ತಿದ್ದ ಚೌಹಾಣ್‌ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Advertisements

ಚೌಹಾಣ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...

ಕಾಂಗ್ರೆಸ್‌ ಕೈ ಜಾರಿದ ರಾಜಸ್ಥಾನ- ವಾಡಿಕೆ ತಪ್ಪಿಸದೆ ಪಕ್ಷ ಬದಲಿಸಿದ ಮತದಾರರು

ರಾಜಸ್ಥಾನದಲ್ಲಿ ಪ್ರತಿ ಅವಧಿಗೂ ಸರ್ಕಾರ ಬದಲಾಯಿಸುವ ರೂಢಿಯಿದೆ ಹಾಲಿ ಚುನಾವಣೆಯಲ್ಲಿ...

Download Eedina App Android / iOS

X