ಹಾವೇರಿ | ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿಗೆ ಬೀಗ ಜಡಿದು ಪ್ರತಿಭಟನೆ

Date:

Advertisements

ಶಿಗ್ಗಾವಿ ತಾಲ್ಲೂಕಿನ ಜೇಕಿನಕಟ್ಟಿ ಗ್ರಾಮದಲ್ಲಿ ೬೫೦ ಲಕ್ಷ ವೆಚ್ಚದಲ್ಲಿ ಸರಕಾರಿ ಮೇಟ್ರಿಕ್ ನಂತರ ಹಾಗೂ ವೃತ್ತಿಪರ ಬಾಲಕರ ವಿಧ್ಯಾರ್ಥಿ ನಿಲಯ ಭೂಮಿ ಪೂಜೆ ಪ್ರೋಟೊ ಕಾಲ್ ಮಾಡದೆ ಕಾರ್ಯಕ್ರಮವನ್ನು ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ ನೇತೃತ್ವದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮುಖಂಡ ನರಹರಿ ಕಟ್ಟಿ
ಮಾತನಾಡಿದ “ಸರಕಾರದ ಯೋಜನೆಯನ್ನು ಅನುಷ್ಠಾನ ಮಾಡುವಾಗ ಗುದ್ದಲಿ ಪೂಜೆ ಸಲ್ಲಿಸುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು ಹಾಗೂ ಸಂಸದರಾದ ಪ್ರಲ್ಹಾದ ಜೋಷಿ, ಹಾಗೂ ವಿ.ಪ.ಸದಸ್ಯರಾದ ಪ್ರದೀಪ ಶೆಟ್ಟರ, ಸಂಕನೂರವರನ್ನು ಅವ್ಹಾನ ನೀಡದೆ, ತಾಲೂಕಾ ಆಡಳಿತ ಪ್ರೋಟೊ ಕಾಲ್ ಮಾಡದೆ ಬೇಕಾ ಬಿಟ್ಟಿ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ” ಎಂದು  ಆರೋಪಿಸಿದರು.

“ಈ ಕುರಿತು ಹಿಂದೋಮ್ಮೆ ಪ್ರತಿಭಟನೆಯನ್ನು ಮಾಡಿದಾಗಲೂ ಕೂಡಾ ಪ್ರೋಟೊ ಕಾಲ್ ಮಾಡಿಯೇ ಕಾರ್ಯಕ್ರಮವನ್ನು ಮಾಡುವದಾಗಿ ಅಧಿಕಾರಿಗಳು ಲಿಖಿತ ಹೇಳಿಕೆಯನ್ನು ನೀಡಿದ್ದರು. ಮತ್ತೆ ಅದೇ ಮಾರ್ಗವನ್ನು ಅನುಸರಿಸುತ್ತಿರುವುದು ಖಂಡನೀಯ” ಎಂದು ಹೇಳಿದರು.

Advertisements

“ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಮಾತನಾಡಿ, “ಪ್ರೋಟೊ ಕಾಲ್ ನಿಯಮವನ್ನು ಪಾಲನೆ ಮಾಡದಿರುವದು ಅಕ್ಷಮ್ಯ ಅಪರಾಆಗಿದ್ದು, ಸಂಬಂದಿಸಿದ ಅಧಿಕಾರಿಗಳ ಮೇಲೆ ಕ್ರಮವನ್ನು ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಅನುದಾನ ನೀಡಿ ಬಲಪಡಿಸಬೇಕು: ಎಸ್ ಎಫ್ ಐ ಒತ್ತಾಯ

ಈ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರಾದ  ರೇಣುಕಗೌಡ ಪಾಟೀಲ, ಮಂಜುನಾಥ ಬ್ಯಾಹಟ್ಟಿ, ಅನೀಲ ಸಾತಣ್ಣನವರ, ಸಂತೋಷ ದೊಡ್ಡಮನಿ, ಪ್ರತೀಕ ಕೋಳೇಕರ, ಸಚೀನ ಮಡಿವಾಳರ, ಮಂಜು ನಂಜಪ್ಪನವರ, ಅರೂಣ ಬನ್ನಿಕೊಪ್ಪ, ಕೃಷ್ಣಾ ದೊಡ್ಡಮನಿ, ಸೇರಿದಂತೆ ಹಲವಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೋಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X