ಇಂದಿನಿಂದ ವಿಧಾನ ಮಂಡಲ ಅಧಿವೇಶನ: ಮಾ.7ಕ್ಕೆ ಆಯವ್ಯಯ ಮಂಡನೆ

Date:

Advertisements

ವಿಧಾನ ಮಂಡಲದ ಅಧಿವೇಶನ ಇಂದಿನಿಂದ (ಮಾ.3) ಆರಂಭವಾಗಲಿದೆ. ಸೋಮವಾರ (ಇಂದು) ಬೆಳಗ್ಗೆ ರಾಜ್ಯಪಾಲರ ಭಾಷಣದ ನಂತರ ವಿಧಾನಸಭೆ, ವಿಧಾನ ಪರಿಷತ್‌ ಪ್ರತ್ಯೇಕ ಸಮಾವೇಶಗೊಂಡು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸೇರಿದಂತೆ ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಲಿದೆ. ಅಲ್ಲದೇ ಕಲಾಪವನ್ನು ಸುಗಮವಾಗಿ ನಡೆಸುವ ಹಾಗೂ ಉಭಯ ಸದನಗಳ ನಡುವೆ ಸಮನ್ವಯ ಸಾಧಿಸುವ ಸಲುವಾಗಿ ಮಧ್ಯಾಹ್ನದ ನಂತರ ಜಂಟಿ ಕಲಾಪ ಸಲಹಾ ಸಮಿತಿ ಸಭೆಯೂ ನಡೆಯಲಿದೆ.

ಮಾ.4ರಿಂದ ಮಾ.6ರ ವರೆಗೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಈ ವೇಳೆ ಆಡಳಿತ-ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ನಡೆಯುವ ನಿರೀಕ್ಷೆ ಇದೆ.

ಈಗಾಗಲೇ ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಪ್ರಸ್ತಾಪಿಸಿರುವಂತೆ ಸಾಲ ನೀಡುವ ನೆಪದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳ ಕಿರುಕುಳ, ಸರಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸರಣಿ ಸಾವು,ಕಾನೂನು ಮತ್ತು ಸುವ್ಯವಸ್ಥೆ ವಿಚಾರ, ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಸೇರಿದಂತೆ ಇನ್ನಿತರ ವಿಚಾರಗಳನ್ನು ಪ್ರಸ್ತಾಪಿಸಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸನ್ನದ್ದವಾಗಿವೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯ ‘ಗುಜರಾತ್ ಮಾಡೆಲ್’ ಬಚ್ಚಿಟ್ಟ ಸತ್ಯಗಳು!

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟದ ಘಟನೆ, ಬೆಳಗಾವಿಯಲ್ಲಿ ಕನ್ನಡ ಮಾತನಾಡಿದ ನಿರ್ವಾಹಕನ ಮೇಲೆ ಹಲ್ಲೆ, ಮಸಿ ಬಳಿದಿರುವ ಪ್ರಕರಣ ಸದನದಲ್ಲಿ ಪ್ರತಿಧ್ವನಿಸುವ ಸಾಧ್ಯತೆಗಳಿವೆ. ಜತೆಗೆ ಬಿಬಿಎಂಪಿ ವಿಭಜಿಸಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡುವುದು, ಬಿಬಿಎಂಪಿಯನ್ನು ವಿಭಜಿಸಲು ಶಾಸಕ ರಿಝ್ವಾನ್ ಅರ್ಶದ್‌ ನೇತೃತ್ವದ ಜಂಟಿ ಪರಿಶೀಲನಾ ಸಮಿತಿ ನೀಡಿರುವ ವರದಿಯೂ ಚರ್ಚೆಗೆ ಬರಲಿದೆ ಎಂದು ಹೇಳಲಾಗುತ್ತಿದೆ.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.7ಕ್ಕೆ 2025-26ನೇ ಸಾಲಿನ ಆಯವ್ಯಯ ಮಂಡನೆ ಮಾಡಲಿದ್ದು, ಮಾ.10ರಿಂದ ಬಜೆಟ್ ಮೇಲಿನ ಚರ್ಚೆ ನಡೆಯಲಿದೆ. ಇಲಾಖೆವಾರು ಬೇಡಿಕೆಗಳ ಮೇಲೆ ಚರ್ಚೆ ನಡೆಯಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರು ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.

ಅಧಿವೇಶನ ಆರಂಭದ ಬಳಿಕ ಸ್ಪೀಕರ್ ಅಧ್ಯಕ್ಷತೆಯಲ್ಲಿ ಸಿಎಂ, ವಿಪಕ್ಷ ನಾಯಕರ ಉಪಸ್ಥಿತಿಯಲ್ಲಿ ಕಲಾಪ ಸಲಹಾ ಸಮಿತಿ(ಬಿಎಸ್‍ಸಿ) ಸಭೆ ನಡೆಯಲಿದೆ. ಆ ನಂತರ ಪ್ರಶ್ನೋತ್ತರ ಕಲಾಪವೂ ಸೇರಿದಂತೆ ಇನ್ನಿತರ ವಿಚಾರಗಳು ಚರ್ಚೆಗೆ ಸಮಯ ನಿಗದಿಯಾಗಲಿದೆ. ನಾಳೆಯಿಂದ ಮಾ.21ರವರೆಗೆ ಒಟ್ಟು 14 ದಿನಗಳ ಕಾಲ ಅಧಿವೇಶನ ಕಾರ್ಯಕಲಾಪಗಳು ಜರುಗಲಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X