ಜೋರ್ಡಾನ್‌ನಿಂದ ಇಸ್ರೇಲ್‌ಗೆ ಅಕ್ರಮವಾಗಿ ನುಸುಳಲು ಯತ್ನ; ಗುಂಡೇಟಿಗೆ ಭಾರತೀಯ ಬಲಿ

Date:

Advertisements

ಜೋರ್ಡಾನ್‌ನಿಂದ ಇಸ್ರೇಲ್‌ಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ಭಾರತೀಯ ವ್ಯಕ್ತಿ ಗುಂಡೇಟಿಗೆ ಬಲಿಯಾಗಿದ್ದಾನೆ. ಭಾರತೀಯ ವ್ಯಕ್ತಿಯು ಇಸ್ರೇಲ್‌ಗೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದ್ದು ಈ ವೇಳೆ ಜೋರ್ಡಾನ್‌ ಯೋಧರು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ.

ಮೃತ ಭಾರತೀಯನನ್ನು ಕೇರಳದ ಥಂಬಾ ನಿವಾಸಿ ಥಾಮಸ್ ಗೇಬ್ರಿಯಲ್ ಪೆರೆರಾ ಎಂದು ಗುರುತಿಸಲಾಗಿದೆ. ಹಾಗೆಯೇ ಈ ಘಟನೆ ಫೆಬ್ರವರಿ 10ರಂದು ನಡೆದಿದ್ದು ಸದ್ಯ ಮಾಹಿತಿ ಬಹಿರಂಗವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಇಸ್ರೇಲ್ ವಿರುದ್ಧ ಪ್ರತಿಭಟನೆ; ಸಂಘಟಕರನ್ನು ವಶಕ್ಕೆ ಪಡೆದ ಪೊಲೀಸರು

Advertisements

“ದುರದೃಷ್ಟಕರ ಸಂದರ್ಭದಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ” ಎಂದು ಜೋರ್ಡಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾನುವಾರ ತಿಳಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

“ರಾಯಭಾರ ಕಚೇರಿಯು ಮೃತರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ. ಮೃತ ದೇಹವನ್ನು ಭಾರತಕ್ಕೆ ಸಾಗಿಸಲು ಜೋರ್ಡಾನ್ ಅಧಿಕಾರಿಗಳೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದೆ” ಎಂದು ರಾಯಭಾರ ಕಚೇರಿ ಮಾಹಿತಿ ನೀಡಿದೆ.

ಇದನ್ನು ಓದಿದ್ದೀರಾ? ಅನಿವಾಸಿ ಭಾರತೀಯನ ಕೊಲೆ; 10 ಮಂದಿಗೆ ಜೀವಾವಧಿ ಶಿಕ್ಷೆ

47 ವರ್ಷದ ಥಾಮಸ್ ಪೆರೆರಾ ವಿಸಿಂಟಿಂಗ್ ವೀಸಾದಲ್ಲಿ ಜೋರ್ಡಾನ್‌ಗೆ ಹೋಗಿದ್ದು, ಅದಾದ ಬಳಿಕ ಇಸ್ರೇಲ್‌ಗೆ ಪ್ರವೇಶಿಸಲು ಪ್ರಯತ್ನಿಸಿದರು ಎನ್ನಲಾಗಿದೆ. ಮೇನಂಕುಲಂ ನಿವಾಸಿಯಾದ ಪೆರೆರಾ ಸಂಬಂಧಿ ಎಡಿಸನ್ ಕೂಡಾ ಇಸ್ರೇಲ್‌ಗೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಎಡಿಸನ್‌ಗೂ ಕೂಡಾ ಗುಂಡು ತಗುಲಿದ್ದು, ಚಿಕಿತ್ಸೆ ನೀಡಿ ಭಾರತಕ್ಕೆ ಹಿಂದಿರುಗಿಸಲಾಗಿದೆ.

ಪಶ್ಚಿಮ ದಂಡೆಯಲ್ಲಿ ಹಿಂಸಾಚಾರದ ಹೆಚ್ಚಾಗುತ್ತಿದೆ. ಇಸ್ರೇಲ್- ಹಮಾಸ್ ಯುದ್ಧವೂ ಸಂಪೂರ್ಣ ಅಂತ್ಯ ಕಂಡಿಲ್ಲ. ಈ ನಡುವೆ ಗಡಿಗಳಲ್ಲಿ ಇತರೆ ದೇಶಗಳು ಇನ್ನಷ್ಟು ಭದ್ರತೆ ಹೆಚ್ಚಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X