ಕೊಡಗು | ಕನ್ನಡ ಸಾಹಿತ್ಯಾಭಿವೃದ್ಧಿಗೆ ಶರಣರ ಕೊಡುಗೆ ಅಪಾರ: ಕಸಾಪ ಮಾಜಿ ಅಧ್ಯಕ್ಷ ಟಿ ಪಿ ರಮೇಶ್

Date:

Advertisements

ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶನಿವಾರಸಂತೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಪ್ರಜ ಗುರುಕುಲದ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯ ಸುನಂದಾದೇವಿ, ಸಂಗಮೇಶ್ವರ ಗೌಡ ದಂಪತಿಯ ಪ್ರಾಯೋಜಕತ್ವದಲ್ಲಿ, ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾ ಶರಣ ಲಿಂಗೈಕ ‘ ಮಾಗನೂರು ಬಸಪ್ಪ ಶರಣ ಸಂಸ್ಕೃತಿ ದತ್ತಿ ‘ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಟಿ ಪಿ ರಮೇಶ್ ‘ ಕನ್ನಡ ಸಾಹಿತ್ಯದ ಅಭಿವೃದ್ಧಿಗೆ ಶರಣರ ಕೊಡುಗೆ ಅಪಾರ ‘ ಎಂದರು.

” ಜಗತ್ತಿನ ಮೊದಲ ಸಮಾಜವಾದಿ ಬಸವಣ್ಣನವರು ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದ್ದು ಶರಣ ಸಾಹಿತ್ಯದ ತಿರುಳನ್ನು ಪ್ರಸ್ತುತ ಸಮಾಜಕ್ಕೆ ಅಳವಡಿಸಬೇಕು, ‘ಶರಣ’ ಎಂದರೆ ಸಜ್ಜನ, ಸದ್ಭಕ್ತಿ, ಅನುಭಾವಿ ಎಂಬ ವ್ಯಕ್ತಿತ್ವ.ದತ್ತಿ ನಿದಿಯ ಶರಣ ಮಾಗನೂರು ಬಸಪ್ಪನವರು ಹುಟ್ಟಿನಿಂದ ದೊಡ್ಡವರಾಗಿ ಹುಟ್ಟಿದವರಲ್ಲ; ಹುಟ್ಟಿ ದೊಡ್ಡವರಾಗಿ ಬದುಕಿ, ಬಾಳಿ ಶಿಸ್ತನ್ನು ರೂಢಿಸಿಕೊಂಡವರು.ಶಿಕ್ಷಣ, ಸಂಸ್ಕೃತಿ, ದಾಸೋಹದಂತಹ ಸಮಾಜಮುಖಿ ಕೆಲಸ ಮಾಡಿದವರು. ಕೊಡಗಿನಲ್ಲಿ ಶರಣ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡಬೇಕಿದೆ. ವೈಜ್ಞಾನಿಕ ಯುಗದಲ್ಲಿ ಪಂಚಭೂತಗಳ ಪಾವಿತ್ರ‍್ಯತೆಯನ್ನು ಕಾಪಾಡಬೇಕು, ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಕಾರ್ಯ ಮಾಡಬೇಕಿದೆ.ವಚನ ಸಂದೇಶ ಇಡಿ ಮಾನವ ಕುಲವನ್ನೇ ಸಮಾಜದತ್ತ ಕರೆ ತರುತ್ತದೆ.ಬಸವಾದಿ ಶರಣರು ಆಧ್ಯಾತ್ಮಿಕ ಸಮಾಜವನ್ನು ಕಟ್ಟಿದ್ದು ಜನವಾಣಿಯನ್ನೇ ದೇವವಾಣಿಯೆಂದು ಕರೆದಿದ್ದಾರೆ ” ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಎಂ ಪಿ ಕೇಶವ ಕಾಮತ್ ಮಾತನಾಡಿ ” ಶರಣ ದತ್ತಿ ದಾನಿಗಳ ದಾನದ ಬಗ್ಗೆ,
ವ್ಯಕ್ತಿತ್ವದ ಬಗ್ಗೆ ಸ್ಮರಣೆ ಅತ್ಯಗತ್ಯವಾಗಿದೆ. ಹನ್ನೆರಡನೇ ಶತಮಾನಕ್ಕೂ ಹಿಂದೆ ಸಾಹಿತ್ಯ ಕ್ಲಿಷ್ಟಕರವಾದ ಸಂಸ್ಕೃತ ಭಾಷೆಯಲ್ಲಿದ್ದು, ಜನ ಸಾಮಾನ್ಯರಿಗೆ ತಲುಪುತ್ತಲಿರಲಿಲ್ಲ. ವಚನ ಸಾಹಿತ್ಯ ಬಂದ ನಂತರ ಸುಲಭ ಕನ್ನಡದಲ್ಲಿ ಇದ್ದು ಎಲ್ಲರಿಗೂ ತಲುಪುವಂತಾಯಿತು. ವಚನ ಸಾಹಿತ್ಯದ ಗಾಯನದ ಜತೆಗೆ ಅದರ ಅರ್ಥ ಮತ್ತು ಅದರ ಒಳ ಅರಿವು ಅರ್ಥ ಮಾಡಿಕೊಂಡು ಅದರಲ್ಲಿರುವ ಸಕರಾತ್ಮಕ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕಾಗಿದೆ. ವಚನ ಸಾಹಿತ್ಯವು ಕನ್ನಡ ಸಾಹಿತ್ಯಕ್ಕೆ ಒಂದು ದೊಡ್ಡ ಭಂಡಾರವಿದ್ದಂತೆ ಅತ್ಯಂತ ಪುರಾತನವಾದ ಪರಂಪರೆ ಇದು. ರೋಮಾಂಚನಕಾರಿಯಾದ ಇತಿಹಾಸವಿದೆ. ನಾಗರೀಕತೆಯ ಸುದೀರ್ಘವಾದ ಚರಿತ್ರೆ ಇದೆ. ಸಾಹಿತ್ಯ-ಸಂಸ್ಕೃತಿ, ಧರ್ಮ ಸಿದ್ಧಾಂತಗಳ ಭಂಡಾರವಾಗಿದೆ ” ಎಂದು ಅಭಿಪ್ರಾಯ ತಿಳಿಸಿದರು.

Advertisements

ಸಾಹಿತಿ ಜಲಜಾ ಶೇಖರ್ ಮಾತನಾಡಿ ” 12 ನೇ ಶತಮಾನದ ವಚನ ಸಾಹಿತ್ಯ ಒಂದು ತಪೋವನದಂತೆ ಭಾಸವಾಗುತ್ತದೆ.ಬಸವಾದಿ ಶರಣರ ಕ್ರಾಂತಿಕಾರಿ ಕೆಲಸಗಳು ವಿಶ್ವ ಮಾನ್ಯತೆ ಪಡೆದಿದೆ. ವಚನಕಾರರ ಬದುಕು, ನಡೆ-ನುಡಿ ಸಿದ್ಧಾಂತವೇ ವಚನ ಸಾಹಿತ್ಯ,
ವಚನಕಾರರ ಕಾಯಕ ನಿಷ್ಠೆ ಅನುಕರಣೀಯ, ಹನ್ನೆರಡನೆಯ ಶತಮಾನದಲ್ಲಿ ಪ್ರಜಾಪ್ರಭುತ್ವದ ಉಳಿವಿಗಾಗಿ ಶರಣರು ಮತ್ತು ಶರಣೆಯರು ನಡೆಸಿದ ಕ್ರಾಂತಿ ಅನುಭವ ಮಂಟಪದ ಮೂಲಕ ತೆಗೆದುಕೊಂಡ ನಿರ್ಣಯವಾಗಿತ್ತು. ಪ್ರಜಾಪ್ರಭುತ್ವದ ವಿಚಾರಧಾರೆಗಳನ್ನು ಅತ್ಯಂತ ಸರಳವಾಗಿ ಕನ್ನಡ ಭಾಷೆಯಲ್ಲಿ ವಚನಗಳ ಮೂಲಕ ಮಾನವ ಬದುಕಿಗೆ ದಾರಿದೀಪವಾಗಿ ನೀಡಿದವರು ಬಸವಾದಿ ಶರಣರು. ಅನುಭವ ಮಂಟಪ ಭಾರತದ ಮೊದಲ ಸಂಸತ್ತು. ಹನ್ನೆರಡನೆಯ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಸರಕಾರ ತಂದ ಖ್ಯಾತಿ ಅನುಭವ ಮಂಟಪದ ಶರಣರಿಗೆ ಸಲ್ಲುತ್ತದೆ ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ರಕ್ತ ದಾನದಿಂದ ಆರೋಗ್ಯ ವೃದ್ಧಿ : ಶಾಸಕ ಶ್ರೀವತ್ಸ

ಸೋಮವಾರಪೇಟೆ ತಾಲ್ಲೂಕು ಕಸಾಪ ಅಧ್ಯಕ್ಷ ಎಸ್ ಡಿ ವಿಜೇತ್, ದಾವಣಗೆರೆ ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕರಿಬಸಪ್ಪ ಸ್ವಾಮಿ, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜ ಅಧ್ಯಕ್ಷ ಎಚ್ ವಿ ಶಿವಪ್ಪ ಹಾಗೂ ಸುಪ್ರಜ ಗುರುಕುಲ ಅಧ್ಯಕ್ಷೆ ಡಿ ಸುಜಲಾ ದೇವಿ,ಎಚ್ ವಿ ಶಿವಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಕರಿಬಸಪ್ಪ,
ಶನಿವಾರಸಂತೆ ಹೋಬಳಿ ಕಸಾಪ ಅಧ್ಯಕ್ಷ ಬಿ ಬಿ ನಾಗರಾಜ್,ಕಾರ್ಯದರ್ಶಿ ಎಂ ಪಿ ಮೋಹನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್, ತಾಲ್ಲೂಕು 8 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಶ ಗ ನಯನ ತಾರಾ, ಕಾಫಿ ಬೆಳೆಗಾರ ಎಸ್ ಎಂ ಮಹೇಶ್, ಕಸಾಪ ಪ್ರಮುಖ ಪದಾಧಿಕಾರಿಗಳಾದ ಜೆ ಸಿ ಶೇಖರ್, ಸಿ ಎಂ ಪುಟ್ಟಸ್ವಾಮಿ, ಎ ಪಿ ವೀರರಾಜು, ಕೆ ಪಿ ದಿನೇಶ್, ಸುಬ್ರಹ್ಮಣ್ಯ, ವೆಂಕಟ್ ನಾಯಕ್, ಪ್ರಕಾಶ್ಚಂದ್ರ, ಕೆ ಪಿ ಜಯಕುಮಾರ್, ಎಸ್ ಆರ್ ಶಿವಪ್ಪ, ಎಂ ಎನ್ ಮೂರ್ತಿ, ಶಾಂತ ಮಲ್ಲಪ್ಪ, ಕೇಶವ ಮೂರ್ತಿ, ರಾಮಕುಮಾರ್, ಭಗವಾನ್ ಗೌಡ, ಶಿವಕುಮಾರ್, ಆಶಾ ಪುಟ್ಟಸ್ವಾಮಿ ಸೇರಿದಂತೆ ಹಲವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X