ಲೋಕಾರ್ಪಣೆಗೂ ಮುನ್ನವೇ ಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಭಾನುವಾರ ತಡರಾತ್ರಿ ಅಪಘಾತ ನಡೆದಿದೆ. ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತಪಟ್ಟವರು ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾಮದವರಾಗಿದ್ದಾರೆ.
ಸುಜಾತಮ್ಮ, ಸುನೀಲ್ ವಿರಾಟ್ ಗಾಯಾಳುಗಳು. ಕೆಜಿಎಫ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಬೇತಮಂಗಲ ಕಡೆಗೆ ಇನ್ನೋವಾ ಕಾರು ತೆರಳುತ್ತಿತ್ತು. ಬೇತಮಂಗಲ ಕಡೆಯಿಂದ ಬೆಂಗಳೂರು ಕಡೆಗೆ ಬೈಕ್ ಸವಾರ ತೆರಳುತ್ತಿದ್ದ. ಬೈಕ್ ಸವಾರ ಎದುರು ಡಿಕ್ಕಿ ತಪ್ಪಿಸಲು ಹೋಗಿ ಕಾರು ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲೇ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.