ಮಣಿಪುರ ಹಿಂಸಾಚಾರ | ಉದ್ರಿಕ್ತರಿಂದ ಕೇಂದ್ರ ಸಚಿವ ರಂಜನ್‌ ಸಿಂಗ್ ನಿವಾಸಕ್ಕೆ ಬೆಂಕಿ

Date:

Advertisements
  • ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಾಗ ಕೇರಳಕ್ಕೆ ತೆರಳಿದ್ದ ರಂಜನ್‌ ಸಿಂಗ್
  • ಒಂದು ತಿಂಗಳಿಂದ ಮೇತೀ, ಕುಕಿ ಸಮುದಾಯಗಳ ನಡುವೆ ಹಿಂಸಾಚಾರ

ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಗಲಭೆ ಪೀಡಿತ ರಾಜ್ಯದ ಕೊಂಗಾ ಪ್ರದೇಶದಲ್ಲಿರುವ ಕೇಂದ್ರ ಸಚಿವ ಆರ್‌.ಕೆ. ರಂಜನ್‌ ಸಿಂಗ್‌ ಅವರ ನಿವಾಸಕ್ಕೆ ಅಪರಿಚಿತ ಉದ್ರಿಕ್ತರು ಗುರುವಾರ (ಜೂನ್‌ 15) ರಾತ್ರಿ ಬೆಂಕಿ ಹಚ್ಚಿದ್ದಾರೆ.

ಇಂಫಾಲದಲ್ಲಿ ನಿಷೇಧಾಜ್ಞೆ ಜಾರಿಯಾಗಿತ್ತು. ಅದರ ನಡುವೆಯೇ ರಾತ್ರಿ 11ರ ಸುಮಾರಿಗೆ ಸಾವಿರಕ್ಕೂ ಹೆಚ್ಚು ಜನರ ಗುಂಪು ಕೊಂಗಾ ಪ್ರದೇಶದಲ್ಲಿರುವ ರಂಜನ್‌ ಅವರ ನಿವಾಸದ ಮೇಲೆ ದಾಳಿ ಮಾಡಿ, ಬೆಂಕಿ ಹಚ್ಚಿದೆ.

ರಂಜನ್ ಸಿಂಗ್ ವಿದೇಶಾಂಗ ಇಲಾಖೆ ರಾಜ್ಯ ಖಾತೆ ಸಚಿವರಾಗಿದ್ದಾರೆ. ಅವರ ನಿವಾಸಕ್ಕೆ ಬೆಂಕಿ ಹಚ್ಚಿದ ಪರಿಣಾಮ ಭಾರೀ ಹಾನಿಯಾಗಿದೆ. ಘಟನೆ ಸಂದರ್ಭದಲ್ಲಿ ರಂಜನ್ ಹಾಗೂ ಅವರ ಕುಟುಂಬ ಮಣಿಪುರದಲ್ಲಿ ಇರಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

Advertisements
ರಾನಜಾ
ಕೇಂದ್ರ ಸಚಿವ ರಂಜನ್‌ ಸಿಂಗ್‌ ಅವರ ನಿವಾಸಕ್ಕೆ ಅಪರಿಚಿತರು ಬೆಂಕಿ ಹಚ್ಚಿರುವುದು

ಘಟನೆ ನಡೆದಾಗ ರಂಜನ್‌ ಅವರ ನಿವಾಸದಲ್ಲಿ ಒಂಬತ್ತು ಭದ್ರತಾ ಬೆಂಗಾವಲು ಪಡೆಯ ಸಿಬ್ಬಂದಿ, ಐದು ಭದ್ರತಾ ಸಿಬ್ಬಂದಿ ಮತ್ತು ಎಂಟು ಹೆಚ್ಚುವರಿ ಸಿಬ್ಬಂದಿ ಕರ್ತವ್ಯದಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ರಂಜನ್‌ ಸಿಂಗ್ ಅವರ ನಿವಾಸಕ್ಕೆ ದಾಳಿ ನಡೆಸಿದ ಉದ್ರಿಕ್ತರು ಎಲ್ಲ ದಿಕ್ಕುಗಳಿಂದ ಪೆಟ್ರೋಲ್ ಬಾಂಬ್‌ಗಳನ್ನು ಎಸೆದರು ಎಂದು ಸಚಿವರ ನಿವಾಸದಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಹೇಳಿದರು.

“ಸರ್ಕಾರಿ ಕೆಲಸದ ವಿಚಾರವಾಗಿ ನಾನು ಈಗ ಕೇರಳದಲ್ಲಿದ್ದೇನೆ. ಅದೃಷ್ಟವಶಾತ್ ನನ್ನ ಮನೆಯಲ್ಲಿ ಕಳೆದ ರಾತ್ರಿ ಯಾರೊಬ್ಬರೂ ಗಾಯಗೊಂಡಿಲ್ಲ. ಕಿಡಿಗೇಡಿಗಳು ಪೆಟ್ರೋಲ್ ಬಾಂಬ್‌ಗಳೊಂದಿಗೆ ಬಂದಿದ್ದರು. ನನ್ನ ಮನೆಯ ನೆಲಮಹಡಿ ಮತ್ತು ಮೊದಲ ಮಹಡಿಗೆ ಹಾನಿಯಾಗಿದೆ. ಈಗಲೂ ಶಾಂತಿ ಕಾಪಾಡುವಂತೆ ಜನರಲ್ಲಿ ಮನವಿ ಮಾಡುತ್ತೇನೆ. ಈ ರೀತಿಯ ಕೃತ್ಯದಲ್ಲಿ ಭಾಗಿಯಾಗುವುದು ಸಂಪೂರ್ಣ ಅಮಾನವೀಯವಾಗಿದೆ” ಎಂದು ಘಟನೆಯ ಕುರಿತು ರಂಜನ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸೇನೆ ಮತ್ತು ಅರೆ ಪಡೆಗಳನ್ನು ನಿಯೋಜಿಸಲಾಗಿದೆ. ಅದಾಗ್ಯೂ, ಪೂರ್ವ ಇಂಫಾಲದ ಖಾಮೆಲಾಕ್ ಗ್ರಾಮದ ಮೇಲೆ ಶಂಕಿತ ಭಯೋತ್ಪಾದಕರು ಮಂಗಳವಾರ (ಜೂನ್ 13) ರಾತ್ರಿ ದಾಳಿ ನಡೆಸಿದ್ದರು.
ಘಟನೆಯಲ್ಲಿ 9 ಮಂದಿ ಮೃತಪಟ್ಟು, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಕುಕಿ ಸಮುದಾಯದ ನಾಯಕಿ ನೆಮ್ಯಾ ಕಿಪ್ಗೆನ್ ಅವರ ಅಧಿಕೃತ ನಿವಾಸಕ್ಕೆ ಬುಧವಾರ (ಜೂನ್ 14) ರಾತ್ರಿ ಅಪರಿಚಿತರು ಬೆಂಕಿ ಹಚ್ಚಿದ್ದರು. ಗುರುವಾರವೂ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು.

ರಂಜನ್ ಸಿಂಗ್ ಅವರ ನಿವಾಸಕ್ಕೆ ಬೆಂಕಿ ಹಚ್ಚಿರುವ ಘಟನೆಯಿಂದ ಸ್ಥಳದಲ್ಲಿ ಭದ್ರತಾ ಪಡೆ ನಿಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಆಂಧ್ರಪ್ರದೇಶ | ಲಾರಿ ಡಿಕ್ಕಿ ಹೊಡೆದು ಆನೆ ಮರಿಗಳು ಸಾವು

ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೇಟಿ ಮತ್ತು ಕುಕಿ ಸಮುದಾಯದ ನಡುವೆ ಒಂದು ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮೇತೀ ಸಮುದಾಯದ ಎಸ್‌ಟಿ ಮೀಸಲಾತಿ ಬೇಡಿಕೆ ವಿರೋಧಿಸಿ ಮೇ 3 ರಂದು ಮಣಿಪುರದಲ್ಲಿ ‘ಬುಡಕಟ್ಟು ಏಕತಾ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಘರ್ಷಣೆಗೆ ಕಾರಣವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X