ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿ 10 ದಿನ ಕಳೆದರೂ 8 ಕಾರ್ಮಿಕರು ಪತ್ತೆಯಾಗಿಲ್ಲ.
ದೋಮಲಪೆಂಟಾ ಬಳಿಯ ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ ಕುಸಿತದಲ್ಲಿ 8 ಮಂದಿ ಕಾರ್ಮಿಕರು ಸಿಲುಕಿದ್ದರು. ಈಗಾಗಲೇ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.
ಈ ಕುರಿತು ಎನ್‌ಡಿಆರ್‌ಎಫ್ ಕಮಾಂಡೆಂಟ್ ವಿವಿಎನ್ ಪ್ರಸನ್ನ ಕುಮಾರ್ ಮಾತನಾಡಿ, ಸುರಂಗ ಕುಸಿತದ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಸೇರಿದಂತೆ ಉತ್ತರಾಖಂಡದ ರ‍್ಯಾಟ್ ಮೈನರ್, 300 ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಕಳೆದ 10 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆದಿದ್ದು, ಇಲ್ಲಿಯವರೆಗೂ ಯಾವುದೇ ಕಾರ್ಮಿಕರು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಹೆಸರಲ್ಲಿ ಬಿಜೆಪಿ ಅಧಿಕ ಪ್ರಸಂಗ
ಸದ್ಯ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ. ಇನ್ನೂ ಹೈದರಾಬಾದ್‌ನ ರಾಷ್ಟ್ರೀಯ ಭೂಭೌತ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಸುರಂಗದೊಳಗೆ ನೆಲಕ್ಕೆ ನುಗ್ಗುವ ರಾಡಾರ್ ಸಮೀಕ್ಷೆಯನ್ನು ನಡೆಸಿದ್ದಾರೆ. ಸಮೀಕ್ಷೆ ಬಳಿಕ ಗುರುತಿಸಿದ ಸ್ಥಳಗಳನ್ನು ರಕ್ಷಣಾ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಘಟನಾ ಸ್ಥಳಕ್ಕೆ ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಭಾನುವಾರ ಭೇಟಿ ನೀಡಿ, ಸಿಲುಕಿಕೊಂಡಿರುವ ಕಾರ್ಮಿಕರ ಮಾಹಿತಿ ಪಡೆದುಕೊಂಡರು ಮತ್ತು ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಬೆಂಬಲ ನೀಡುವ ಕುರಿತು ತಿಳಿಸಿದರು.
ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿತ್ತು
