ಮಂಜೇಶ್ವರ | ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಮೃತ್ಯು

Date:

Advertisements

ಕೇರಳ ಕರ್ನಾಟಕದ ಗಡಿ ಜಿಲ್ಲೆಯಾದ ಕಾಸರಗೋಡಿನ ಮಂಜೇಶ್ವರ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಸೋಮವಾರ ರಾತ್ರಿ 10.30 ರ ಸುಮಾರಿಗೆ ಕಾಸರಗೋಡು ಭಾಗದಿಂದ ಅತಿ ವೇಗದಲ್ಲಿ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಹೊಸಂಗಡಿ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್ ಸಮೀಪದ ಡಿವೈಡರ್‌ಗೆ ಡಿಕ್ಕಿ ಹೊಡೆದದ್ದರಿಂದ ಈ ಅವಘಡ ಸಂಭವಿಸಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಒಬ್ಬನನ್ನು ಗಂಭೀರ ಗಾಯಗಳೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisements

ಪೈವಳಿಕೆ ಬಾಯಿಕಟ್ಟೆ ನಿವಾಸಿಗಳಾದ ಜನಾರ್ಧನ, ಪುತ್ರ ಪುತ್ರ ವರುಣ್ ಹಾಗೂ ಕಿಶನ್ ಸಾವನ್ನಪ್ಪಿದ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ರತ್ನಂ ಎಂಬಾತನನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ರಭಸಕ್ಕೆ ಕಾರು ನುಜ್ಜು ಗುಜ್ಜಾಗಿ ಕಾರಿನ ಒಳಗಿದ್ದವರು ರಸ್ತೆಗೆಸೆಯಲ್ಪಟ್ಟಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

IMG 20250304 WA0057

ವರುಣ್‌ ಎಂಬಾತನನ್ನು ಮಂಗಳೂರಿಗೆ ಕರೆದೊಯ್ಯುವ ಸಲುವಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಮಂಜೇಶ್ವರದ ಮಧ್ಯೆ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಮಂಜೇಶ್ವರ ಪೊಲೀಸರು ಹಾಗೂ ಸ್ಥಳೀಯರು ಸೇರಿ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಹಾಗೂ ಮೃತದೇಹಗಳನ್ನು ಶವಾಗಾರಕ್ಕೆ ಸಾಗಿಸುವಲ್ಲಿ ನೆರವಾದರು.

1003655188

ಘಟನೆಯ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ರೀತಿಯ ಅಪಘಾತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರೂ ಸರಿಯಾದ ಸೂಚನಾ ಫಲಕ ಹಾಕದೇ ಇರುವುದರಿಂದಾಗಿ ಇಂತಹ ಭೀಕರ ಅಪಘಾತ ಸಂಭವಿಸುತ್ತಿದೆ.‌ ಹಾಗಾಗಿ, ಕೂಡಲೇ ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X