ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಜಯಪುರದಲ್ಲಿ ಮಾರ್ಚ್ 6ರಂದು ಮಹಿಳಾ ಸಾಂಸ್ಕೃತಿಕ ಹಬ್ಬ-2025 ಹಮ್ಮಿಕೊಳ್ಳಲಾಗಿದೆ.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ ಹಾಗೂ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಮಹಿಳಾ ಸಾಂಸ್ಕೃತಿಕ ಹಬ್ಬದ ಅಂಗವಾಗಿ ಮ್ಯಾರಥಾನ್, ಜುಂಬಾ ಮತ್ತು ಯೋಗ ತರಬೇತಿ, ಮಹಿಳಾ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಹಾಗೂ ಆಹಾರ ಮೇಳ, ವಿವಿಧ ವಿಷಯಗಳ ಕುರಿತ ಕೌಶಲ್ಯ ತರಬೇತಿ ಹಾಗೂ ಕಾರ್ಯಾಗಾರ, ರಸಪ್ರಶ್ನೆ ಕಾರ್ಯಕ್ರಮಗಳು, ಭಾಷಣ ಸ್ಪರ್ಧೆ, ಮತ್ತಿತರ ಸ್ಪರ್ಧೆಗಳು, ಶೈಕ್ಷಣಿಕ, ಕ್ರೀಡೆ, ಬಂಜಾರಾ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಕವಿಗೋಷ್ಟಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ‘ಎಲ್ಲ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ: ಹಕ್ಕುಗಳು, ಸಮಾನತೆ, ಸಬಲೀಕರಣ’ “ಹೆಣ್ಣು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ” ಕುರಿತು ವಿಚಾರ-ವಿನಿಮಯ ಮತ್ತು ವಿಶೇಷ ಉಪನ್ಯಾಸ, ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.
ಉದ್ಘಾಟನಾ ಸಮಾರಂಭ: ‘ಮಹಿಳಾ ಸಾಂಸ್ಕೃತಿಕ ಹಬ್ಬ-2025’ ಉದ್ಘಾಟನಾ ಸಮಾರಂಭವನ್ನು ಮಾರ್ಚ್ 6ರಂದು ಬೆಳಿಗ್ಗೆ 10:30ಕ್ಕೆ ಮಹಿಳಾ ವಿವಿಯ ಆಡಳಿತ ಭವನದ ಮುಖ್ಯ ವೇದಿಕೆಯಲ್ಲಿ ಆಯೋಜಿಸಲಾಗಿದ್ದು, ಕಲಬುರಗಿಯ ಕರ್ನಾಟಕ ರಂಗಾಯಣ ನಿರ್ದೇಶಕಿ ಡಾ. ಸುಜಾತ ಜಂಗಮಶೆಟ್ಟಿ ಉದ್ಘಾಟಿಸಲಿದ್ದಾರೆ. ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ರೂಮಿ ಹರೀಶ ಅವರು ‘ಮಾನವ ಹಕ್ಕುಗಳೇ ಮಹಿಳಾ ಹಕ್ಕುಗಳು’ ಎಂಬ ವಿಷಯದ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ, ಎಲ್ಲ ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ವೀರಪ್ಪನ್ ಅಡಗುದಾಣಗಳಲ್ಲಿ ಒಂದಾದ ಪಾಲಾರ್ ಹಾಡಿಗೆ ಬೆಳಕು; ಬುಡಕಟ್ಟುಗಳ ಮೊಗದಲ್ಲಿ ಮಂದಹಾಸ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಭೀಮವ್ವ ಶಿಳ್ಳೇಕ್ಯಾತರ ಹಾಗೂ ಬೆಂಗಳೂರಿನ ಜಾನಪದ ಸಂಶೋಧಕಿ ಮತ್ತು ಕಲಾವಿದೆ ಶಿಲ್ಪಾ ಮುಡಬಿ ಕೋಥಾಕೋಟಾ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ವಹಿಸಲಿದ್ದಾರೆ. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ, ಎಲ್ಲ ಸಿಂಡಿಕೇಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಮಹಿಳಾ ಸಾಂಸ್ಕೃತಿಕ ಹಬ್ಬದ ಸದಸ್ಯ ಸಂಚಾಲಕಿ ಪ್ರೊ. ಲಕ್ಷ್ಮೀದೇವಿ ವೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿದ್ದಾರೆ.